ಮಡಿಕೇರಿ, ಅ. 27: ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ 2019-20ನೇ ಶೈಕ್ಷಣಿಕ ಸಾಲಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 2018-19ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ ಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆ ದಿನವಾಗಿದೆ. ಪರೀಕ್ಷೆಯು 2019 ರ ಏಪ್ರಿಲ್ 6 ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9731823457, 9482557322, 9449592048 ನ್ನು ಸಂಪರ್ಕಿಸಬಹುದು.