ಮಡಿಕೇರಿ, ಅ. 29: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಸುಬೇದಾರ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಆಶ್ರಯದಲ್ಲಿ ತಾ. 31 ರಂದು ಅಪ್ಪಯ್ಯ ಗೌಡರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಸುದರ್ಶನ ವೃತ್ತದ ಬಳಿ ಇರುವ ಅಪ್ಪಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆ ನಡೆಯಲಿದೆ. 10 ಗಂಟೆಗೆ ಕೋಟೆ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಉದ್ಘಾಟಿಸುವರು.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಕೆ.ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ತಾ.ಪಂ. ಅಧ್ಯಕ್ಷೆ ಶೋಭಾ ಮೋಹನ್, ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಜಿಲ್ಲಾಧಿಕಾರಿ ಶ್ರೀವಿದ್ಯಾ, ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ. ಆಗಮಿಸುವರು. ಮುಖ್ಯ ಭಾಷಣಕಾರರಾಗಿ ವಕೀಲ ಕೆ.ಪಿ. ಬಾಲಸುಬ್ರಮಣ್ಯ ಆಗಮಿಸುವರು.