ಮಡಿಕೇರಿ, ಅ. 29: ಇತ್ತೀಚಿನ ದಿನಗಳಲ್ಲಿ ವಿಶ್ವವಿದ್ಯಾನಿಲಯಗಳನ್ನು ಕೂಡ ಜಾತಿ ಆಧಾರದಲ್ಲಿ ಪರಿಗಣಿಸುತ್ತಿರುವದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಮಾಜಿ ಕಾನೂನು ಸಚಿವ ಯಂ.ಸಿ. ನಾಣಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.ನಗರದ ಫೀ.ಮಾ ಕೆ.ಎಂ. ಕಾರ್ಯಪ್ಪ ಕಾಲೇಜಿನ ಆವರಣದಲ್ಲಿ ಹಳೆಯ ವಿದ್ಯಾರ್ಥಿ ಸಂಘದ ಸಹಕಾರದಿಂದ ನಿರ್ಮಾಣಗೊಂಡಿರುವ ನೂತನ ಕೊಠಡಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಶ್ವವಿದ್ಯಾ ನಿಲಯಗಳನ್ನು ಜಾತಿ ಆಧಾರದಲ್ಲಿ ಪರಿಗಣಿಸಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ, ಆದ್ದರಿಂದ ಶಿಕ್ಷಣ ಸಂಸ್ಥೆಗಳು ಮಡಿಕೇರಿ, ಅ. 29: ಇತ್ತೀಚಿನ ದಿನಗಳಲ್ಲಿ ವಿಶ್ವವಿದ್ಯಾನಿಲಯಗಳನ್ನು ಕೂಡ ಜಾತಿ ಆಧಾರದಲ್ಲಿ ಪರಿಗಣಿಸುತ್ತಿರುವದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಮಾಜಿ ಕಾನೂನು ಸಚಿವ ಯಂ.ಸಿ. ನಾಣಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.

ನಗರದ ಫೀ.ಮಾ ಕೆ.ಎಂ. ಕಾರ್ಯಪ್ಪ ಕಾಲೇಜಿನ ಆವರಣದಲ್ಲಿ ಹಳೆಯ ವಿದ್ಯಾರ್ಥಿ ಸಂಘದ ಸಹಕಾರದಿಂದ ನಿರ್ಮಾಣಗೊಂಡಿರುವ ನೂತನ ಕೊಠಡಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಶ್ವವಿದ್ಯಾ ನಿಲಯಗಳನ್ನು ಜಾತಿ ಆಧಾರದಲ್ಲಿ ಪರಿಗಣಿಸಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ, ಆದ್ದರಿಂದ ಶಿಕ್ಷಣ ಸಂಸ್ಥೆಗಳು ಪ್ರೊ.ನಾಗಪ್ಪ ಗೌಡ ಮಾತನಾಡಿ, ಕೊಡಗಿನ ಜನಪ್ರತಿನಿಧಿಗಳು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಈ ಕಾಲೇಜು ಉತ್ತಮ ರೀತಿಯಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಧ್ಯಾಪಕರ ಜವಾಬ್ದಾರಿ ದೊಡ್ಡದಿದ್ದು, ವಿದ್ಯಾರ್ಥಿಗಳನ್ನು ಸರಿ ಮಾರ್ಗದಲ್ಲಿ ಕೊಂಡೊಯ್ಯುವ ಶಕ್ತಿ ಅವರಿಗಿದೆ ಎಂದರು.

ಕಾಲೇಜಿನÀ ಪ್ರಾಂಶುಪಾಲರಾದ ಡಾ. ಪಾರ್ವತಿ ಅಪ್ಪಯ್ಯ ಅವರನ್ನು ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಇದೇ ಸಂದರ್ಭ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷೆ ಶೋಭಾ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಾಪಕ ಅಧ್ಯಕ್ಷ ಕೆ.ಎಸ್.ದೇವಯ್ಯ, ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.