ಶನಿವಾರಸಂತೆ, ಅ. 30: ಗೌಡಳ್ಳಿ ಪಂಚಾಯಿತಿ ವ್ಯಾಪ್ತಿಯ ನಾಗೇಂದ್ರ ಎಂಬವರ ಮಗ ಶಶಿಕುಮಾರ್ (21) ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಅವಿವಾಹಿತ ಶಶಿಕುಮಾರ್ ಸುಮಾರು 3-4 ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲಿದ್ದ ವಿಷ ಪದಾರ್ಥ ಸೇವಿಸಿದ್ದ ಆತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ತಂದೆ ನಾಗೇಂದ್ರ ಅವರು ನೀಡಿದ ದೂರಿನನ್ವಯ ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ ಪ್ರಕರಣ ದಾಖಲಿಸಿದ್ದಾರೆ.