ಮಡಿಕೇರಿ, ಅ. 30: ಮೂರ್ನಾಡು ಹೋಬಳಿ ಕ.ಸಾ.ಪ. ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಸ್ಪರ್ದೆಯನ್ನು ವಿದ್ಯಾರ್ಥಿಗಳ ಪರೀಕ್ಷೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು, ನವೆಂಬರ್ 2ನೇ ವಾರದಲ್ಲಿ ನಡೆಸಲಾಗುವದೆಂದು ಕ.ಸಾ.ಪ. ಹೋಬಳಿ ಅಧ್ಯಕ್ಷ ಪಿ.ಪಿ. ಸುಕುಮಾರ್ ತಿಳಿಸಿದ್ದಾರೆ.