ನಾಪೆÇೀಕ್ಲು, ಅ. 29: ವಿದ್ಯಾರ್ಥಿಗಳನ್ನು ಅನುತ್ತೀರ್ಣ ಗೊಳಿಸಬಾರದೆಂಬ ಸರಕಾರದ ಕಾನೂನಿದೆ. ಆದರೆ ಹಾಜರಾತಿ ಕಡಿಮೆಯಿರುವ ಮಕ್ಕಳನ್ನು ಅನುತ್ತೀರ್ಣಗೊಳಿಸಬಹುದಾಗಿದೆ. ಎಲ್ಲಾ ಮಕ್ಕಳನ್ನು ಶಾಲೆಗೆ ಕಡ್ಡಾಯವಾಗಿ ಕಳುಹಿಸಬೇಕು ಎಂದು ನಾಪೆÇೀಕ್ಲು ಪ್ರೌಢಶಾಲಾ ಶಿಕ್ಷಕಿ ಉಷಾ ರಾಣಿ ಹೇಳಿದರು.

ಸಮೀಪದ ಚೆರಿಯಪರಂಬು ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಮಾರ್ಗದರ್ಶಿ ಶಿಕ್ಷಕಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಈ ಬಾರಿ ಜಿಲ್ಲೆಯಲ್ಲಿ ನಡೆದ ಪ್ರಕೃತಿ ವಿಕೋಪದ ಕಾರಣದಿಂದ ಶಾಲೆಗೆ ರಜೆ ನೀಡಲಾದ ಹಿನ್ನೆಲೆಯಲ್ಲಿ ಪಾಠ ಪ್ರವಚನಗಳು ಎಂದಿನಂತೆ ನಡೆದಿಲ್ಲ. ಹೆಚ್ಚಿನ ಒತ್ತಡದಿಂದ ವಿದ್ಯಾರ್ಥಿಗಳಿಗೆ ಕಲಿಸುವ ಅನಿವಾರ್ಯತೆಯಿದೆ. ವಿದ್ಯಾರ್ಥಿಗಳು ಈ ಬಗ್ಗೆ ಕಾಳಜಿಯಿಂದ ಪಾಠ ಪ್ರವಚನದತ್ತ ಗಮನಹರಿಸಬೇಕು ಎಂದರು.

ಮಕ್ಕಳ ಕಲಿಕೆಯನ್ನು ಶಿಕ್ಷಕರು ಮತ್ತು ಪೆÇೀಷಕರು ಒಟ್ಟಾಗಿ ತಿಳಿದುಕೊಳ್ಳುವ ಉದ್ದೇಶದಿಂದ ಈ ಸಮುದಾಯದತ್ತ ಶಾಲಾ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಹಮ್ಮಿಕೊಂಡಿದೆ. ಇದರಿಂದ ಮಕ್ಕಳಲ್ಲಿರುವ ನ್ಯೂನತೆಯನ್ನು ಪೆÇೀಷಕರು ಮತ್ತು ಶಿಕ್ಷಕರು ತಿಳಿದುಕೊಂಡು ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪೆÇೀಷಕರಾದ ಸಿ.ಎಂ.ಉಸ್ಮಾನ್, ಮತ್ತಿತರರು ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಕರೀಂ ನೆರವೇರಿಸಿದರು. ವೇದಿಕೆಯಲ್ಲಿ ಎಲ್ಲಾ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕ ವೃಂದ ಹಾಜರಿದ್ದರು. ವಿದ್ಯಾರ್ಥಿನಿಯರಿಂದ ಪ್ರಾರ್ಥನೆ, ಮುಖ್ಯ ಶಿಕ್ಷಕಿ ಪಾರ್ವತಿ ಸ್ವಾಗತ, ಶಿಕ್ಷಕ ಸುಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಕಿ ರೇಖಾ ನಿರೂಪಿಸಿ, ವಂದಿಸಿದರು.