ಮಡಿಕೇರಿ, ಅ. 29: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಜಂಟಿ ಆಶ್ರಯದಲ್ಲಿ ಪ್ಯಾನಲ್ ವಕೀಲರಿಗೆ ತರಬೇತಿ ಕಾರ್ಯಕ್ರಮವು ತಾ. 30 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಚಾಲನೆ ನೀಡಲಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ. ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಬಿ.ಕೆ ಮನು, ಸರ್ಕಾರಿ ಅಭಿಯೋಜಕಿ ಕೃಷ್ಣವೇಣಿ ಇತರರು ಪಾಲ್ಗೊಳ್ಳಲಿದ್ದಾರೆ.