ಮಡಿಕೇರಿ, ಅ. 29: ಜಿಲ್ಲಾಡಳಿತದ ವತಿಯಿಂದ ನ. 1 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ್, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಇತರರು ಪಾಲ್ಗೊಳ್ಳಲಿದ್ದಾರೆ. ಸಂಜೆ 4.30 ಗಂಟೆಗೆ ಕಾವೇರಿ ಕಲಾಕ್ಷೇತ್ರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.