ಕುಶಾಲನಗರ, ಅ. 29: ಕಾವೇರಿ ಮಹಾಆರತಿ ಬಳಗದ ವತಿಯಿಂದ ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ 86ನೇ ಮಹಾಆರತಿ ಬೆಳಗಲಾಯಿತು.
ಸ್ಥಳೀಯ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ಕಾವೇರಿ ಅಷ್ಟೋತ್ತರ, ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ನಂತರ ಜೀವನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು.
ಈ ಸಂದರ್ಭ ಸಮಿತಿಯ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ವನಿತಾ ಚಂದ್ರ ಮೋಹನ್, ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್, ಬಿ.ಜೆ.ಅಣ್ಣಯ್ಯ ಮತ್ತಿತರರು ಇದ್ದರು. ಇದೇ ಸಂದರ್ಭ ಕುಶಾಲನಗರ ಕೊಪ್ಪ ಕಾವೇರಿ ಪ್ರತಿಮೆಗೆ ಅಭಿಷೇಕ ಮತ್ತು ಆರತಿ ಕಾರ್ಯಕ್ರಮ ನಡೆಯಿತು. ಬಾರವಿ ಕನ್ನಡ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್ ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು.