ಮಡಿಕೇರಿ, ಅ. 29: ಜಿಲ್ಲಾಡಳಿತ, ಜಿ.ಪಂ. ಮತ್ತು ಆಯುಷ್ ಇಲಾಖೆ ವತಿಯಿಂದ ನ. 5 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಧನ್ವಂತರಿ ಜಯಂತಿ ಹಾಗೂ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಯಲಿದೆ.