ಮಡಿಕೇರಿ, ಅ. 29: ಮಳೆಗಾಲದಲ್ಲಿ ಪ್ರವಾಹದಿಂದ ದ್ವೀಪದಂತಾಗುವ ಭಾಗಮಂಡಲದಲ್ಲಿ ಮೇಲು ಸೇತುವೆ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ಸೋಮವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಯನ್ನು ಆರಂಭಿಸಲಾಗಿದೆ.ರೂ. 30 ಕೋಟಿ ವೆಚ್ಚದ ಸೇತುವೆಯನ್ನು ಎ.ವಿ.ಆರ್. ತೇಜಸ್ ಸನ್ಪ್ರಾಪ್ರೈವೆಟ್ ಲಿಮಿಟೆಡ್ ಸಂಸ್ಥೆ ನಿರ್ಮಿಸಲಿದೆ. ಈಗಾಗಲೇ ಮುಖ್ಯಮಂತ್ರಿಗಳು ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ್ದು, ಗುತ್ತಿಗೆ ಸಂಸ್ಥೆ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಕಾಮಗಾರಿಯನ್ನು ಆರಂಭಿಸಿತು.ಒಂದೂವರೆ ವರ್ಷ ಅವಧಿಯಲ್ಲಿ ಮೇಲು ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಮಳೆ ಅಡ್ಡಿಪಡಿಸಿದರೆ ಅವಧಿ ವಿಸ್ತರಿಸುವ ಸಾಧ್ಯತೆಗಳಿವೆ. ಕಳೆದ ಹಲವು ವರ್ಷಗಳ ಬೇಡಿಕೆಯಾದ ಸೇತುವೆ ನಿರ್ಮಾಣ ಕಾರ್ಯ ಆರಂಭಗೊಂಡಿರುವ ಬಗ್ಗೆ ಭಾಗಮಂಡಲ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

-ನ್ಯೂಸ್ ಡೆಸ್ಕ್