ಒಡೆಯನಪುರ, ಅ. 29: ಇತ್ತೀಚೆಗೆ ವೀರಾಜಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರು ಕಬಡ್ಡಿ ಮತ್ತು ಫುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲೆಯಿಂದ ಆಯ್ಕೆಗೊಂಡಿದ್ದಾರೆ.
ತುಮಕೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲೆಯಿಂದ ಪ್ರತಿನಿಧಿಸಲಿರುವ ಸದರಿ ಕಾಲೇಜಿನ ವಿದ್ಯಾರ್ಥಿನಿಯರಾದ ಎಂ.ಎಲ್. ಗಾನವಿ, ಹೆಚ್.ಹೆಚ್. ಅಶ್ವಿತ, ಎಸ್.ಡಿ. ಅನುಷ, ಬಿ.ವಿ. ರಕ್ಷ, ಹೆಚ್.ವಿ. ವರ್ಷ, ಎಸ್.ಡಿ. ಅಂಕಿತ, ಎಂ.ಎಸ್. ಕೀರ್ತನ, ಹೆಚ್.ವಿ. ಸ್ಪೂರ್ತಿ ಮತ್ತು ಬಿ.ಎಸ್. ಸಿಂಚನ.
ಮಂಡ್ಯದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬಾಲಕಿಯರ ವಿಭಾಗದ ಫುಟ್ಬಾಲ್ ಪಂದ್ಯಾವಳಿಗೆ ಆಯ್ಕೆಯಾದ ಕಾಲೇಜಿನ ವಿದ್ಯಾರ್ಥಿನಿಯರಾದ ಕೆ.ಆರ್. ಶ್ರವಿಣಿ, ಕೆ.ಪಿ. ಗಾನ್ಯ, ಎಸ್.ಡಿ. ಅನುಷ ಮತ್ತು ಕೆ.ಎಂ. ಪೂಜ ಜಿಲ್ಲೆಯಿಂದ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲೆಯಿಂದ ಆಯ್ಕೆಗೊಂಡಿದ್ದಾರೆ.