ವೀರಾಜಪೇಟೆ: ವೀರಾಜಪೇಟೆಯ ತಾಲೂಕು ಆಡಳಿತದಿಂದ ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಮಹರ್ಷಿ ವಾಲ್ಮೀಕಿಯ ಭಾವಚಿತ್ರವನ್ನು ತಹಶೀಲ್ದಾರ್ ಗೋವಿಂದರಾಜು ಅನಾವರಣ ಮಾಡಿ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಕಂದಾಯ ಸಿಬ್ಬಂದಿಗಳು ಮತ್ತಿತರರು ಭಾಗವಹಿಸಿದ್ದರು.ಸುಂಟಿಕೊಪ್ಪ: ಸುಂಟಿಕೊಪ್ಪ ಪ್ರೌಢಶಾಲೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ವಾಲ್ಮೀಕಿ ಭಾವಚಿತ್ರಕ್ಕೆ ಪುಪ್ಷಾರ್ಚಣೆ ಮಾಡಿ ಮಾತನಾಡಿದ ಮುಖ್ಯ ಶಿಕ್ಷಕ ಬಾಲಕೃಷ್ಣ, ವಿದ್ಯಾರ್ಥಿಗಳು ದಾರ್ಶನಿಕ ಹಾಗೂ ಮಹಾನ್ ವ್ಯಕ್ತಿಗಳ ಜೀವನ ಆದರ್ಶ ಮತ್ತು ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆಯಬೇಕು ಎಂದರು.

ಅಧ್ಯಾಪಕಿ ಕೆ.ಕೆ. ಪುಷ್ಪ ಮಾತನಾಡಿ, ವಾಲ್ಮೀಕಿ ಮಹಾಕಾವ್ಯದಲ್ಲಿ ಮಾನವಿಯ ಮೌಲ್ಯಗಳು ಹಾಗೂ ಆದರ್ಶ ತತ್ವಗಳು ಅಡಕವಾಗಿವೆ. ಅದನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು. ವಿದ್ಯಾರ್ಥಿ ಎಂ.ಹೆಚ್. ಅಮೀರ್ ವಾಲ್ಮೀಕಿ ಜೀವನ ಕುರಿತು ಮಾತನಾಡಿದರು. ಶಿಕ್ಷಕರುಗಳಾದ ಟಿ.ಜಿ. ಪ್ರೇಮ್‍ಕುಮರ್, ಶಾಂತ ಹೆಗಡೆ, ಎಂ.ಆರ್. ಸುನಂದ, ಟಿ. ಪವಿತ್ರ, ಮಂಜುಳಾ, ಎಂ. ಕೆರೂರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ನಾಪೋಕ್ಲು: ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಿಂದ ಆದಿ ಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಬೊಪ್ಪಂಡ ಜಾಲಿ ಬೋಪಯ್ಯ ವಹಿಸಿದ್ದರು.

ಸಭೆಯಲ್ಲಿ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ನಿರ್ದೇಶಕರಾದ ಕಲ್ಯಾಟಂಡ ಪೂಣಚ್ಚ, ಪ್ರಾಂಶುಪಾಲೆ ಬಿ.ಎಂ. ಶಾರದ, ಶಿಕ್ಷಕ, ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಲ್ಯಾಟಂಡ ಪೂಣಚ್ಚ, ಶಾರದ ಹಾಗೂ ಸುಬ್ಬಮ್ಮ ವಾಲ್ಮೀಕಿ ಮಹರ್ಷಿಯ ಬಗ್ಗೆ ಮಾತನಾಡಿದರು.