ಮಡಿಕೇರಿ, ಅ. 31: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸ್ಮರಣೆ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿನಾಚರಣೆ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.

ರಾಷ್ಟ್ರೀಯ ಸಂಕಲ್ಪ ದಿನದ ಬಗ್ಗೆ ಮಾತನಾಡಿದ ವಕೀಲ ಎಂ.ಎ. ನಿರಂಜನ ಅವರು ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿ ಹಲವು ಆದರ್ಶ, ಮಾದರಿ ಆಡಳಿತ ನೀಡುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿ ದ್ದರು. ಬ್ಯಾಂಕುಗಳ ರಾಷ್ಟ್ರೀಕರಣ ಸೇರಿದಂತೆ 18 ಅಂಶಗಳ ಕಾರ್ಯಕ್ರಮ ಗಳನ್ನು ಜಾರಿಗೊಳಿಸುವ ಮೂಲಕ ಇಡೀ ದೇಶದಲ್ಲಿ ಶ್ರೀಸಾಮಾನ್ಯರಿಗೆ ಮಡಿಕೇರಿ, ಅ. 31: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸ್ಮರಣೆ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿನಾಚರಣೆ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.

ರಾಷ್ಟ್ರೀಯ ಸಂಕಲ್ಪ ದಿನದ ಬಗ್ಗೆ ಮಾತನಾಡಿದ ವಕೀಲ ಎಂ.ಎ. ನಿರಂಜನ ಅವರು ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿ ಹಲವು ಆದರ್ಶ, ಮಾದರಿ ಆಡಳಿತ ನೀಡುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿ ದ್ದರು. ಬ್ಯಾಂಕುಗಳ ರಾಷ್ಟ್ರೀಕರಣ ಸೇರಿದಂತೆ 18 ಅಂಶಗಳ ಕಾರ್ಯಕ್ರಮ ಗಳನ್ನು ಜಾರಿಗೊಳಿಸುವ ಮೂಲಕ ಇಡೀ ದೇಶದಲ್ಲಿ ಶ್ರೀಸಾಮಾನ್ಯರಿಗೆ ಕಾರ್ಯಕ್ರಮಗಳ ಬಗ್ಗೆ ಮನನ ಮಾಡಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್ ಬೋಧಿಸಿದರು. ಕಾರ್ಯಕ್ರಮಕ್ಕೂ ಮೊದಲು ಸಂತ ಮೈಕಲರ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.

ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ಗೋಪಾಲಕೃಷ್ಣ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಎಸ್.ಸದಾಶಿವಯ್ಯ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್, ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.