ಸೋಮವಾರಪೇಟೆ, ಅ. 31: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 17 ರಂದು ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ನ.ಲ. ವಿಜಯ ತಿಳಿಸಿದ್ದಾರೆ. ನ. 17 ರಂದು ಪೂರ್ವಾಹ್ನ 10.30ಕ್ಕೆ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಜಲಾ ಕಾಳಪ್ಪ ಉದ್ಘಾಟಿಸಲಿದ್ದು, ಸಾಹಿತ್ಯ ಕೃಷಿಯಲ್ಲಿ ವಿದ್ಯಾರ್ಥಿಗಳ ಪಾತ್ರ ವಿಷಯದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಪ್ರೌಢ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡ ಆಶುಭಾಷಣ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಭಾವಗೀತೆ ಗಾಯನ ಸ್ಪರ್ಧೆ, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಕರ್ನಾಟಕ ರಾಜ್ಯದ ನಕ್ಷೆ ಬಿಡಿಸುವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ನ.ಲ. ವಿಜಯ ಅವರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ.9845005453, 9480995739, 8762983849 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.