ಸೋಮವಾರಪೇಟೆ, ನ. 1: ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕಂದೂರು ಗ್ರಾಮದ ವಾರ್ಡ್ ಸಭೆ ಸದಸ್ಯ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕಲ್ಕಂದೂರು ವಾರ್ಡ್‍ನಲ್ಲಿ ಈವರೆಗೆ ಕೈಗೊಳ್ಳಲಾಗಿರುವ ಕಾಮಗಾರಿಗಳ ಬಗ್ಗೆ ಸದಸ್ಯ ಪ್ರಕಾಶ್ ಅವರು ಮಾಹಿತಿ ನೀಡಿದರು. ವಾರ್ಡ್‍ನಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಸಭೆಯ ಗಮನಕ್ಕೆ ತಂದರು. ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ರೇಣುಕಾ ವೆಂಕಟೇಶ್, ಸದಸ್ಯರಾದ ವನಜಾಕ್ಷಿ ತಿಮ್ಮಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಶ್ ಅವರುಗಳು ಉಪಸ್ಥಿತರಿದ್ದರು.