ಶ್ರೀಮಂಗಲ: ಕನ್ನಡ ಸಾಹಿತ್ಯ ಪರಿಷತ್ತು ಶ್ರೀಮಂಗಲ ಹೋಬಳಿ ಘಟಕ ಹಾಗೂ ಟಿ. ಶೆಟ್ಟಿಗೇರಿಯ ಮಾಂiÀiಣಮಾಡ ಮಂದಯ್ಯ ಸ್ಮಾರಕ ಸರಕಾರಿ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಸಭಾಂಗಣದಲ್ಲಿ ರಾಜ್ಯೋತ್ಸವ ಜರುಗಿತು.

ಕಾರ್ಯಕ್ರವiದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಮಂಗಲ ಹೋಬಳಿ ಘಟಕದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಎರಡು ಸಾವಿರ ವರ್ಷದ ಇತಿಹಾಸ ಹೊಂದಿರುವ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಪ್ರಪಂಚದ ಏಕೈಕ ಸಮೃದ್ಧ ಭಾಷೆ ಕನ್ನಡ. ಕನ್ನಡಿಗರೆಲ್ಲರೂ ಕನ್ನಡವನ್ನು ಪ್ರೀತಿಸಿ ಬೇರೆ ಭಾಷೆಯತ್ತ ಒಲವು ತೋರಿಸದೆ ಕನ್ನಡವನ್ನೇ ಮಾತನಾಡಿದರೆ ಕನ್ನಡ ಉಳಿಸುವದು ಕಷ್ಟವಲ್ಲ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಎಂ.ಎಂ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಕನ್ನಡ ರಾಜ್ಯೋತ್ಸವ ಆಚರಣೆಯ ಮಹತ್ವ ತಿಳಿಸಿದರು. ಕನ್ನಡಿಗರು ಎಲ್ಲಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಎಲ್ಲರು ಅತೀ ಹೆಚ್ಚು ಕನ್ನಡ ಪತ್ರಿಕೆ, ಪುಸ್ತಕಗಳನ್ನು ಓದುವು ಮೂಲಕ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸುವ ಪ್ರಯತ್ನವನ್ನು ಮಾಡಬೇಕಿದೆ ಎಂದರು.

ಕ.ಸಾ.ಪ. ಶ್ರೀಮಂಗಲ ಹೋಬಳಿ ಘಟಕದ ಕಾರ್ಯದರ್ಶಿ ಮಂಡಂಗಡ ಅಶೋಕ್ ಮಾತನಾಡಿ, ನಮ್ಮ ನೆಲದಲ್ಲಿದ್ದುಕೊಂಡು ಬೇರೆ ಭಾಷೆಯಲ್ಲಿ ಮಾತನಾಡುವದರಿಂದ ಕನ್ನಡಕ್ಕಾಗುವ ಅನ್ಯಾಯವನ್ನು ತಡೆಗಟ್ಟಲು ವಿದ್ಯಾರ್ಥಿಗಳು ಇಂದಿನಿಂದಲೇ ಮನಸ್ಸು ಮಾಡಬೇಕೆಂದರು.

ಕವಿ ಉಳುವಂಗಡ ಕಾವೇರಿ ಉದಯ ಕರುನಾಡನ್ನು ಪ್ರೀತಿಸಿ ಕನ್ನಡ ತಾಯಿಯ ಋಣ ತೀರಿಸು ಎಂಬ ಕವನ ವಾಚಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುನಂದ ಕನ್ನಡ ವರ್ಣಮಾಲೆಯ ಹಾಡು ಹಾಡಿದರು.

ಈ ಸಂದರ್ಭ ಕ.ಸಾ.ಪ. ಸದಸ್ಯೆ ಕರ್ತಮಾಡ ಧರಣಿ ಸೋಮಯ್ಯ, ಸಹ ಶಿಕ್ಷಕ ಬಿ. ರಾಜೇಶ್ ಹಾಗೂ ವಿದ್ಯಾರ್ಥಿಗಳು ಕನ್ನಡ ಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಕ.ಸಾ.ಪ. ಹೋಬಳಿ ಕಾರ್ಯದರ್ಶಿ ಬುಟ್ಟಿಯಂಡ ಸುನಿತ ಗಣಪತಿ, ಪ್ರೌಢಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪಂದ್ಯಂಡ ವಾಣಿ ಮಾದಯ್ಯ ಶಿಕ್ಷಕರಾದ ಸವಿತ, ಪ್ರಸನ್ನ, ಸುನಿಲ್, ಚಂದನ್, ಮಹಾದೇವಪ್ಪ, ಪದ್ಮವತಿ, ಮಧು, ನೇತ್ರ, ಚಂದ್ರಮತಿ, ಉಷಾ,ಕವಿತ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸುನಿತ ಸ್ವಾಗತಿಸಿ, ರಾಜೇಶ್ ನಿರೂಪಿಸಿ, ಕವಿತ ವಂದಿಸಿದರು.

ಕೂಡಿಗೆ: ಕುಶಾಲನಗರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಶಿರಂಗಾಲ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ಶಿರಂಗಾಲ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಹಂಡ್ರಂಗಿ ನಾಗರಾಜ್ ಮಾತನಾಡಿ, ಕನ್ನಡ ನಾಡು, ನುಡಿ, ಸಂಸ್ಕøತಿಯನ್ನು ಉಳಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸೋಮಯ್ಯ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರಾದ ಹೆಚ್.ಆರ್. ಶಿವಕುಮಾರ್, ಸಿ.ಎಸ್. ಹೇಮಲತಾ, ಕೆ.ಎ. ವೀಣಾ, ಕೆ.ಎನ್. ಪಲ್ಲವಿ, ಪ್ರೌಢಶಾಲಾ ವಿಭಾಗದ ರಮ್ಯ ವೇದಿಕೆಯಲ್ಲಿದ್ದರು. ಕುಶಾಲನಗರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿಗಳು ಇದ್ದರು. ನಂತರ ಕುಶಾಲನಗರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಿಹಿ ವಿತರಿಸಲಾಯಿತು.

ಗೋಣಿಕೊಪ್ಪಲು: ಗೋಣಿಕೊಪ್ಪಲುವಿನ ಆಟೋ ಚಾಲಕರ - ಮಾಲೀಕರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸಿ.ಕೆ. ಬೋಪಣ್ಣ ಮುಂದಾಳತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಆಟೋ ನಿಲ್ದಾಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಅಧ್ಯಕ್ಷ ಡಾ. ಚಂದ್ರಶೇಖರ್ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ತಾಲೂಕು ಅಧ್ಯಕ್ಷ ಕೇಶವ್ ಕಾಮತ್, ಬಿ.ಎನ್. ಪ್ರಕಾಶ್, ಪಂಚಾಯಿತಿ ಅಧ್ಯಕ್ಷೆ ಸೆಲ್ವಿ, ಸದಸ್ಯರಾದ ರಾಮಕೃಷ್ಣ, ರತಿ ಅಚ್ಚಪ್ಪ, ರಾಜಶೇಖರ್ ಸಂಘದ ಉಪಾಧ್ಯಕ್ಷ ಜಪ್ಪು ಅಚ್ಚಪ್ಪ, ಕಾರ್ಯದರ್ಶಿ ಸುರೇಶ್ ಕನ್ನಡಾಭಿಮಾನಿಗಳಾದ ಸುಬ್ರಮಣ್ಯ, ಸೇರಿದಂತೆ ಆಟೋ ಚಾಲಕರು-ಮಾಲೀಕರು, ಸಾರ್ವಜನಿಕರು ಭಾಗವಹಿಸಿದ್ದರು. ಸ್ಥಳೀಯ ಶಾಲೆಯ ವಿದ್ಯಾರ್ಥಿಗಳು ಕನ್ನಡ ಗೀತೆ ಹಾಡಿದರು.

ನಂತರ ಗೋಣಿಕೊಪ್ಪ ಕೃಷಿ ಮಾರುಕಟ್ಟೆ ಆವರಣದಲ್ಲಿ ಜಮಾವಣೆಗೊಂಡ ಆಟೋ ರಿಕ್ಷಾಗಳು ಸರತಿ ಸಾಲಿನಲ್ಲಿ ನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಸಾಗಿದವು. ಆರ್.ಎಂ.ಸಿ. ಆವರಣದಲ್ಲಿ ಗೋಣಿಕೊಪ್ಪ ಠಾಣೆಯ ಠಾಣಾಧಿಕಾರಿ ಶ್ರೀಧರ್ ಮೆರವಣಿಗೆಗೆ ಕನ್ನಡ ಧ್ವಜ ಬೀಸುವ ಮೂಲಕ ಚಾಲನೆ ನೀಡಿದರು. ಮುಖ್ಯ ರಸ್ತೆಯಲ್ಲಿ ಕನ್ನಡಾಂಬೆಯ ಹೊತ್ತು ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಸಾಗಿ ಬಂತು. ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರು ಕಾರ್ಯಕ್ರಮವನ್ನು ಉತ್ಸುಕತೆಯಿಂದ ವೀಕ್ಷಿಸಿದರು. ಕನ್ನಡ ಅಭಿಮಾನಿಗಳು ವಾಧ್ಯಗೋಷ್ಠಿಗೆ ರಸ್ತೆ ಉದ್ದಕ್ಕೂ ಕುಣಿದು ಕುಪ್ಪಳಿಸಿದರು. ಗೋಣಿಕೊಪ್ಪಲುವಿನಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಆಟೋ ನಿಲ್ದಾಣವನ್ನು ಕನ್ನಡ ಬಾವುಟ, ಬಂಟಿಂಗ್ಸ್ ಹಾಗೂ ಲೈಟಿಂಗ್ಸ್‍ಗಳಿಂದ ಸಿಂಗರಿಸಲಾಗಿತ್ತು. ಆಟೋ ಚಾಲಕರ ಸಂಘದ ಪದಾಧಿಕಾರಿಗಳಾದ ಆಟೋ ವಿನು, ಜಪ್ಪು ಅಚ್ಚಪ್ಪ, ಸುರೇಶ್, ಜಯಣ್ಣ ಮುಂತಾದವರು ಮೆರವಣಿಗೆಯ ಮುಂಚೂಣಿಯಲ್ಲಿದ್ದರು. ಗೋಣಿಕೊಪ್ಪ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

ಕೆ.ನಿಡುಗಣೆ: ಕೆ.ನಿಡುಗಣೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ನಡೆಯಿತು. ಪಂಚಾಯಿತಿ ಅಧ್ಯಕ್ಷೆ ಉದಿಯಂಡ ರೀಟಾ ಮುತ್ತಣ್ಣ ಧ್ವಜಾರೋಹಣ ಮಾಡಿದರು. ಪಂಚಾಯಿತಿ ಸದಸ್ಯ ಮುದ್ದಂಡ ಬೋಪಣ್ಣ, ಅಭಿವೃದ್ಧಿ ಅಧಿಕಾರಿ ದೇವಯ್ಯ ಭಾಗವಹಿಸಿದ್ದರು.ಸುಂಟಿಕೊಪ್ಪ: ನಮ್ಮ ಸುಂಟಿಕೊಪ್ಪ ಬಳಗದಿಂದ ಕನ್ನಡ ವೃತ್ತದಲ್ಲಿ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಕೊಡಗರಹಳ್ಳಿಯ ಹಿರಿಯ ನಾಗರಿಕ ಬಿ.ವಿ. ಚಂದ್ರಶೇಖರ್ ಮಾತನಾಡಿ, ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖಗೊಳ್ಳುತ್ತಿರುವದು ವಿಷಾದನೀಯ ಎಂದರು.

ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಶುಭಾಶಯ ಕೋರಿದರು. ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆ, ಹಟ್ಟಿಹೊಳೆ ನಿರ್ಮಲ ವಿದ್ಯಾಭವನ ಶಾಲೆಯ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭ ಅಂತರರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗಳಿಂದ ಪದಕಗಳನ್ನು ಪಡೆದಿರುವ ಸುಂಟಿಕೊಪ್ಪ ಗ್ರಾ.ಪಂ. ನೌಕರ ಹಾಗೂ ವಿಕಲಚೇತನ ಮಂದಣ್ಣ ಅವರನ್ನು ಸನ್ಮಾನಿಸಲಾಯಿತು.

ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ, ವಿಎಸ್‍ಎಸ್‍ಎನ್ ಬ್ಯಾಂಕ್ ನಿರ್ದೇಶಕರಾದ ಕೆ.ಪಿ. ಜಗನ್ನಾಥ್, ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಡಾ. ಯಶೋದರ ಪೂಜಾರಿ, ತಾ.ಪಂ. ಮಾಜಿ ಉಪಾಧ್ಯಕ್ಷ ಮಾಳೆಯಂಡ ಪೆಮ್ಮಯ್ಯ, ಚುಟುಕು ಸಾಹಿತಿ ಹಾ.ತಿ. ಜಯಪ್ರಕಾಶ್, ಕಾರ್ಮಿಕ ಮತ್ತು ಚಾಲಕರ ಸಂಘದ ಜಿಲ್ಲಾ ಮಾಜಿ ಅಧ್ಯಕ್ಷ ಅಣ್ಣಾ ಶರೀಫ್, ತಲೆ ಹೊರೆ ಕನ್ನಡಾಭಿಮಾನಿ ಸಂಘದ ಅಧ್ಯಕ್ಷ ಎಂ.ಎಸ್. ರವಿ, ಆಟೋ ಚಾಲಕರ ಸಂಘ, ಕಾರ್ಮಿಕ ಮತ್ತು ವಾಹನ ಚಾಲಕರ ಸಂಘದ ಅಧ್ಯಕ್ಷ ರಮೇಶ್ ರೈ, ಎಎಸ್‍ಐ ಶಿವಪ್ಪ, ಹಿರಿಯ ನಾಗರಿಕ ಎಂ.ಎ. ವಸಂತ, ನಮ್ಮ ಸುಂಟಿಕೊಪ್ಪ ಬಳಗದ ಡೆನ್ನಿಸ್ ಡಿಸೋಜ, ಜಾಹೀದ್, ರಂಜಿತ್, ಕೆ.ಎಸ್. ಅನಿಲ್, ಬಿ.ಎಸ್. ಅಶೋಕ್ ಶೇಟ್, ಬಿ.ಕೆ. ಶಶಿಕುಮಾರ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.

ಬಳಗದ ಸದಸ್ಯ ಕೆ.ಎಸ್. ಅನಿಲ್ ಸ್ವಾಗತಿಸಿ, ಎಂ.ಎಸ್. ಸುನಿಲ್ ಅತಿಥಿಗಳ ಪರಿಚಯಿಸಿ, ಶಾಲಾ ಮಕ್ಕಳು ನಾಡಗೀತೆಯನ್ನು ಹಾಡಿದರು.

ಮಡಿಕೇರಿ: ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್. ಮನುಶೆಣೈ ಧ್ವಜಾರೋಹಣ ಮಾಡುವ ಮೂಲಕ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು.

ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್, ಟ್ರಸ್ಟಿಗಳಾದ ಶ್ರೀಧರ್ ಹೂವಲ್ಲಿ, ಸುಮಾ ಶೆಣೈ ಸಿಬ್ಬಂದಿ ಯಮುನ, ಸವಿತ, ರಾಜೇಶ್, ಹಾಗೂ ವರ್ತಕ ಅಶ್ರಫ್, ಪತ್ರಕರ್ತ ಪ್ರಸಿನ್ ಹಾಗೂ ಪುಟಾಣಿಗಳಾದ ಮೌಲ್ಯ, ಚರಿತ, ತರುಣ್ ಭಾಗವಹಿಸಿದ್ದರು.

ಕುಶಾಲನಗರ: ಕುಶಾಲನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಆಶ್ರಯದಲ್ಲಿ ರಾಜ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ವಿ.ಪಿ. ನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟ್ಟಣದ ಆಟೋ ನಿಲ್ದಾಣದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕಾರ್ಯಕ್ರಮದ ಅಂಗವಾಗಿ ನಿಲ್ದಾಣದ ಆವರಣದಲ್ಲಿ ಗಿಡ ನೆಡಲಾಯಿತು.

ಶಾಲಾ ಮಕ್ಕಳಿಂದ ನಾಡಗೀತೆ ಮಾತನಾಡಿದ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ವಿ.ಪಿ. ನಾಗೇಶ್ ಕನ್ನಡ ಭಾಷಾಭಿಮಾನವನ್ನು ಎತ್ತಿ ಹಿಡಿಯುವದರಲ್ಲಿ ಆಟೋ ಚಾಲಕರು ಮೊದಲಿಗರಾಗಿದ್ದು, ಕನ್ನಡವನ್ನು ಉಳಿಸಿ ಬೆಳೆಸಬೇಕಾಗಿರುವದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.

ಆಟೋ ಚಾಲಕರಾದ ನವೀನ್, ಅನಿಶ್, ಅರುಣ, ಅನಿಲ್, ಚಾಲಕರ ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.

ಕೂಡಿಗೆ: ಕನ್ನಡ ಭಾಷೆಯ ಹಿರಿಮೆ ಉಳಿದಿರುವದು ಗ್ರಾಮಾಂತರಗಳಿಂದ. ಕನ್ನಡ ಭಾಷೆಗೆ ಅಪಮಾನ ಮಾಡದೆ, ನಮ್ಮ ಮಾತೃಭಾಷೆಗೆ ಗೌರವಕೊಟ್ಟು, ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಹೇಳಿದರು. ರಾಜ್ಯೋತ್ಸವ ಆಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್‍ಕುಮಾರ್ ಮಾತನಾಡಿ, ಕನ್ನಡ ಭಾಷೆಗೆ ಹೆಚ್ಚು ಒತ್ತು ನೀಡುತ್ತಿರುವ ಗ್ರಾಮೀಣ ಪ್ರದೇಶದಲ್ಲು ಕನ್ನಡ ಭಾಷೆ ತನ್ನ ನೆಲೆಯನ್ನು ಕಲ್ಪಿಸಿಕೊಂಡಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಕಲ್ಪನಾ, ಕಾರ್ಯದರ್ಶಿ ಶಿಲ್ಪ, ಕಂದಾಯ ವಸೂಲಿಗಾರ ಕೆ.ಸಿ. ರವಿ ಮೊದಲಾದವರಿದ್ದರು.

ಕೂಡುಮಂಗಳೂರು: ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ನೆರವೇರಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಸಾವಿತ್ರಿ ರಾಜನ್, ಶೀಲಾ ಸುರೇಶ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಯೇಷಾ, ಕಾರ್ಯದರ್ಶಿ ಮಾದಪ್ಪ ಇದ್ದರು.ಸಿದ್ದಾಪುರ: ಮಾಲ್ದಾರೆಯ ಜನಪರ ಸಂಘಟನೆ ವತಿಯಿಂದ ಗುಡ್ಲೂರಿನ ಗಾಂಧಿ ಭಾವಚಿತ್ರದ ಮುಂದೆ ಕಾರ್ಯಕ್ರಮ ನಡೆಸಲಾಯಿತು. ಕನ್ನಡವನ್ನು ಹುಡುಕುವ ಸ್ಥಿತಿ ಕರುನಾಡಿನಲ್ಲಿ ಬಾರದಿರಲಿ ಎಂದರು. ಹಸಿರು ಕರ್ನಾಟಕದಲ್ಲಿ ಉಸಿರಾಗಲಿ ಕನ್ನಡ ಎಂದು ನುಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಆ್ಯಂಟೋನಿ, ಪ್ರಭಾಕರ್, ಮೂರ್ತಿ, ಅಲಿ, ಅಣ್ಣಯ್ಯ, ಶಂಶೀರ್, ಸತೀಶ್ ಇನ್ನಿತರರು ಹಾಜರಿದ್ದರು.

ಸುಂಟಿಕೊಪ್ಪ: ರಾಜ್ಯೋತ್ಸವದ ಅಂಗವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಧ್ವಜಾರೋಹಣ ನೇರವೇರಿಸಿದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನಂತರ ಭುವನೇಶ್ವರಿಗೆ ಪುಷ್ಪಾರ್ಚನೆಯನ್ನು ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್, ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ಪಂಚಾಯಿತಿ ಸದಸ್ಯರುಗಳಾದ ಬಿ.ಎಂ. ಸುರೇಶ್, ಶಿವಮ್ಮ ಮಹೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ, ಕಾರ್ಯದರ್ಶಿ ಜಿ.ಆರ್. ಶ್ರೀಧರ್ ಹಾಗೂ ಸಿಬ್ಬಂದಿಗಳು ಇದ್ದರು.

ಸೋಮವಾರಪೇಟೆ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಪತ್ರಕರ್ತರ ಸಂಘ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ವಕೀಲ ಹೆಚ್.ಸಿ. ನಾಗೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ.ಸಾ.ಪ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಎಸ್. ಮಹೇಶ್, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಿ.ಟಿ. ತಿಮ್ಮಶೆಟ್ಟಿ, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಹಾಲೆಬೇಲೂರು ನಿರ್ವಾಣಿ ಶೆಟ್ಟಿ, ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಪಿ. ಲೋಕೇಶ್, 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಜಲ ಕಾಳಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೊನ್ನಂಪೇಟೆ: ಪೊನ್ನಂಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಜಾ ಅಚ್ಚುತ್ತನ್, ತಾಲೂಕು ಪಂಚಾಯಿತಿ ಸದಸ್ಯೆ ಮೂಕಳೇರ ಆಶಾ ಪೂಣಚ್ಚ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪುಚ್ಚಿಮಾಡ ಹರೀಶ್, ರಾಮಕೃಷ್ಣ, ಸಹ ಶಿಕ್ಷಕರಾದ ಆರ್. ನಿಂಗರಾಜ್ ನಾಡಗೀತೆಯಲ್ಲಿ ಸಂಗೀತದೊಂದಿಗೆ ಹಾಡಿದರು.

ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ಸ್ವಾಗತಿಸಿದರು. ವಿದ್ಯಾರ್ಥಿಗಳು ನಾಡಗೀತೆಯನ್ನು ಸಹ ಶಿಕ್ಷಕ ನಿಂಗರಾಜು ಅವರ ನೇತೃತ್ವದಲ್ಲಿ ಭಾಷಣಗಳಿಂದ ಕನ್ನಡಾಂಭೆಯ ಬಗ್ಗೆ ತಿಳಿಸಿದರು. ಅತಿಥಿಗಳಾಗಿ ವಿದ್ಯಾರ್ಥಿಗಳಿಗೆ ಕನ್ನಡ ನುಡಿ, ಗೌರವ, ಸ್ವಾಭಿಮಾನ, ಚಿಕ್ಕಂದಿನಿಂದಲೇ ಕಲಿತು ಕರ್ನಾಟಕಕ್ಕೆ ಕೀರ್ತಿಯನ್ನು ತರಬೇಕೆಂದು ಶುಭ ಹಾರೈಸಿದರು. ಕಾರ್ಯಕ್ರಮದ ನಿರೂಪಣೆಯನ್ನು ರೋಜಿ ನೆರವೇರಿಸಿದರು.

ಕರುನಾಡು - ವಿಶಾಲ ಕರ್ನಾಟಕದ ಹೆಸರು ಬಂದ ಬಗ್ಗೆ ಮುಖ್ಯ ಶಿಕ್ಷಕಿ ಬಿ.ಎಸ್. ಪ್ರತಿಮ ವಿವರಿಸಿದರು. ಕ್ರೀಡಾ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿಯಿಂದ ಕ್ರೀಡಾ ಸಾಮಗ್ರಿ ಖರೀದಿಸಲು ಪಿ.ಡಿ.ಓ. ರೂ. 3 ಸಾವಿರದ ಚೆಕ್ ವಿತರಿಸಿದರು.*ಶ್ರೀಮಂಗಲ: ಇಲ್ಲಿನ ಪದವಿಪೂರ್ವ ಕಾಲೇಜಿನಲ್ಲಿ ರಾಜೋತ್ಸವ ಆಚರಿಸಲಾಯಿತು. ಕನ್ನಡ ತಾಯಿಯ ಧ್ವಜವನ್ನು ಆರೋಹಣ ಮಾಡಲಾಯಿತು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಕೆ.ಆರ್. ಅರುಣಾಚಲ ಕನ್ನಡ ನಾಡು ನುಡಿ, ಶಿಲ್ಪಕಲೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಎಂ. ಚಂಗಪ್ಪ ಮಾತನಾಡಿ, ಮಕ್ಕಳಲ್ಲಿ ಕನ್ನಡದ ಮನೋಭಾವ ಇರಬೇಕೆಂದು ಹೇಳಿದರು. ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾಷಣ ಮತ್ತು ದೇಶ ಭಕ್ತಿಗೀತೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದದವರು ಭಾಗವಹಿಸಿದ್ದರು. ಕುಮಾರಿ ಕಲ್ಪನ ಮತ್ತು ತಂಡ ಪ್ರಾರ್ಥಿಸಿದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶನಿವಾರಸಂತೆ: ಶನಿವಾರಸಂತೆ ಪಟ್ಟಣದ ವಿಘ್ನೇಶ್ವರ ಆಟೋ ಚಾಲಕರ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಎಸ್.ಐ. ಹೆಚ್.ಎಂ. ಮರಿಸ್ವಾಮಿ ಧ್ವಜಾರೋಹಣ ನೆರವೇರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಗೌಸ್ ಮಾತನಾಡಿ, ಕನ್ನಡ ನಾಡಿನ ಉತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ಕಡಿಮೆಯಾಗುತ್ತಿದೆ. ಪ್ರತಿ ಕನ್ನಡಿಗನಲ್ಲೂ ಕನ್ನಡತನದ ಅರಿವು ಮೂಡಿದರೆ ಮಾತ್ರ ನಾಡು, ನುಡಿ ಉಳಿದು ಬೆಳೆದೀತು ಎಂದರು.

ಎಸ್.ಐ. ಹೆಚ್.ಎಂ. ಮರಿಸ್ವಾಮಿ ಮಾತನಾಡಿ, ರಾಜ್ಯೋತ್ಸವ ಒಂದು ದಿನ ಆಚರಣೆಯಾಗದೇ ನಿತ್ಯೋತ್ಸವವಾಗಬೇಕು ಎಂದರು. ಡಾ. ಪುಟ್ಟರಾಜ್, ಸಂತೋಷ್, ಸುರೇಶ್, ಧನಂಜಯ್, ಹರಿರಾವ್, ಸಂಘದ ಅಧ್ಯಕ್ಷ ವೀರಭದ್ರ, ಉಪಾಧ್ಯಕ್ಷ ಸುರೇಶ್, ಕಾರ್ಯದರ್ಶಿ ವೀರೇಶ್, ಸದಸ್ಯರಾದ ಜಿ.ವಿ. ರಾಜಶೇಖರ್, ಮಂಜುನಾಥ್, ಪ್ರಕಾಶ್, ಚಿನ್ನು, ಪೃಥ್ವಿ ಮತ್ತಿತರರು ಹಾಜರಿದ್ದರು.

ಸೋಮವಾರಪೇಟೆ ಆಟೋ ಚಾಲಕರ ಸಂಘ: ಇಲ್ಲಿನ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ರಾಜ್ಯೋತ್ಸವದ ಅಂಗವಾಗಿ, ಸಂಘದ ಅಧ್ಯಕ್ಷ ಮೋಹನ್ ಧ್ವಜಾರೋಹಣ ನೆರವೇರಿಸಿದರು. ನಂತರ ಇಲ್ಲಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು. ಮಾಜಿ ಸೈನಿಕ ನಾಗರಾಜು ಮತ್ತು ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಶನಿವಾರಸಂತೆ: ಶನಿವಾರಸಂತೆ ಪಟ್ಟಣದ ವಿಘ್ನೇಶ್ವರ ವಿದ್ಯಾಸಂಸ್ಥೆಯ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯೋತ್ಸವ ಆಚರಿಸಲಾಯಿತು. ಪ್ರಾಂಶುಪಾಲ ಶಿವಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕಿ ನಿತ್ಯಾನಿಧಿ ಉದ್ಘಾಟಿಸಿದರು. ಶಿಕ್ಷಕರಾದ ಕೆ.ಪಿ. ಜಯಕುಮಾರ್ ಮತ್ತು ಅಂಜನಪ್ಪ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶಿಸಿದರು. ವಿದ್ಯಾರ್ಥಿನಿ ಜಿ.ಎಲ್. ಗಾನವಿ ಸ್ವಾಗತಿಸಿ, ಎನ್.ಎಲ್. ದೀಪ್ತಿ ವಂದಿಸಿದರು.