ಮಡಿಕೇರಿ, ನ. 1: ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ತಾ. 7 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಮಡಿಕೇರಿ ತಾಲೂಕಿನ 9 ರಿಂದ 16 ವರ್ಷದ ಮಕ್ಕಳಿಗಾಗಿ ಸ್ಪರ್ಧೆ ಏರ್ಪಡಿಸಲಾಗಿದೆ.

ಸೃಜನಾತ್ಮಕ ಕಲೆ (ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ ಮೂರರಲ್ಲೂ ಕಡ್ಡಾಯ), ಸೃಜನಾತ್ಮಕ ಬರವಣೆಗೆ (ಕಥೆ, ಕವನ, ಪ್ರಬಂಧ ಬರೆಯುವದು ಮೂರರಲ್ಲೂ ಕಡ್ಡಾಯ) ಸೃಜನಾತ್ಮಕ ಪ್ರದರ್ಶನ ಕಲೆ (ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರಾಭಿನಯ, ಯೋಗ, ನೃತ್ಯ, ಮ್ಯಾಜಿಕ್, ಇತ್ಯಾದಿ ಯಾವದಾದರೊಂದು ಕಲೆಯನ್ನು ಮಾತ್ರ ಪ್ರದರ್ಶಿಸಲು ಅವಕಾಶವಿರುತ್ತದೆ. ವಿಜ್ಞಾನದಲ್ಲಿ ನೂತನ ಅವಿಷ್ಕಾರದಲ್ಲಿ-ಮಾದರಿ ಪ್ರದರ್ಶನ ಹಾಗೂ ವಿವರಣೆ ಮತ್ತು ಪ್ರಶ್ನೆಗಳಿಗೆ ಉತ್ತರ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳು ಅವಶ್ಯಕ ಸಾಮಗ್ರಿಗಳನ್ನು ತರಬೇಕಿದೆ. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ ಇವರನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272-228197 ನ್ನು ಸಂಪರ್ಕಿಸಬಹುದು.