ವೀರಾಜಪೇಟೆ, ನ.1: ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಹೊಂದಿ ಅದರಂತೆ ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತದ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿ ಹಿಂದೂಸ್ಥಾನಿ ಸಂಗೀತ ಶೈಲಿಗೂ ಮಹತ್ತರ ಕೊಡುಗೆ ನೀಡಿದೆ. ಕನ್ನಡ ಭಾಷೆಯ ಕವಿಗಳು, ಸಾಹಿತಿಗಳು, ಲೇಖಕರು ಕನ್ನಡ ಸಾರಸ್ವತ ಲೋಕಕ್ಕೆ ಸಲ್ಲಿಸಿದ ಸೇವೆ ಅಪಾರ. ಇಂತಹ ಕವಿಗಳು ಸಾಹಿತಿಗಳನ್ನು ಪ್ರತಿಯೊಬ್ಬ ಕನ್ನಡಿಗನು ಸ್ಮರಿಸುವಂತಾಗಬೇಕು ಎಂದು ತಾಲೂಕು ತಹಶೀಲ್ದಾರ್ ಆರ್.ಗೋವಿಂದರಾಜು ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ತಾಲೂಕು ಮೈದಾನದಲ್ಲಿ ಧ್ವಜರೋಹಣ (ಮೊದಲ ಪುಟದಿಂದ) ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಹೊಯ್ಸಳ ಕಾಲದಲ್ಲಿ ಸಾಹಿತ್ಯ ಮತ್ತು ವಾಸ್ತುಶಿಲ್ಪ ಉನ್ನತ ಸ್ಥಿತಿಯನ್ನು ತಲಪಿದ್ದವು. ಇದು ಕನ್ನಡ ಕಾವ್ಯ ಶೈಲಿಗಳ ಉದಯಕ್ಕೆ ಕಾರಣವಾಯಿತು.. ಅವರ ಕಾಲದಲ್ಲಿ ದೇಗುಲಗಳು ವಿಶಿಷ್ಟವಾದ ಶಿಲ್ಪ ಕಲೆಯನ್ನು ಹೊಂದಿ ಇಂದಿಗೂ ಅದರ ವೈಭವವನ್ನು ಸಾರುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿಯೂ ಕನ್ನಡ ನಾಡು ಮುಂಚೂಣಿಯಲ್ಲಿತ್ತು, ಕಿತ್ತೂರು ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಮುಂತಾದವರನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಬಹುದು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ ಮಾತನಾಡಿ, ಕನ್ನಡ ಭಾಷೆ 8ನೇ ಪರಿಚ್ಛೇದಕ್ಕೆ ಸೇರಿರುವದು ಹೆಸರಾಂತ ಸಾಹಿತಿಗಳಿಗೆ ಕವಿಗಳಿಗೆ ಗೌರವ ನೀಡಿದಂತಾಗಿದೆ. ಇಂದು ಕನ್ನಡ ಭಾಷೆ ಅನ್ಯ ಭಾಷೆಯ ಹಾವಳಿಯಿಂದ ಕ್ಷೀಣಿಸತೊಡಗಿದೆ. ಆಂಗ್ಲವನ್ನು ಬಲವಂತವಾಗಿ ಒಪ್ಪಿಕೊಳ್ಳಬೇಕಾಗಿದ್ದು ಈ ಆಂಗ್ಲ ಭಾಷೆಯ ಹಾವಳಿ ಹಳ್ಳಿಗೂ ಬಂದಿದ್ದು ಹಳ್ಳಿಗಳಲ್ಲಿ ಕನ್ನಡ ಶಾಲೆ ಸೊರಗುತ್ತಿರುವದು ವಿಷಾದನಿಯ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾ ಪಂ ಉಪಾಧ್ಯಕ್ಷ ನೆಲ್ಲೀರ ಚಲನ್‍ಕುಮಾರ್ ಸಭೆಯನ್ನುದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ವಿಶೇಷ ಆಹ್ವಾನಿತರಾಗಿ ತೂಕ್ ಬೊಳಕ್ ಸಂಸ್ಕøತಿ ಕಲೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಶಂಕರಿ ಪೊನ್ನಪ್ಪ, ತಾ.ಪಂ. ಸದಸ್ಯ ವೈ.ಎಂ. ಪ್ರಕಾಶ್, ಡಿ.ವೈ.ಎಸ್.ಪಿ ನಾಗಪ್ಪ , ನಗರ ಪೊಲೀಸ್ ಠಾಣಾಧಿಕಾರಿ ಸಂತೋಷ್ ಕಶ್ಯಪ್. ಸಿ ಗಣೇಶ್ ನಂಜಪ್ಪ, ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ತಹಶೀಲ್ದಾರ್ ಧ್ವಜಾರೋಹಣ ಮಾಡಿ ಗೌರವ ರಕ್ಷೆ ಸ್ವೀಕರಿಸಿದರು. ಪೊಲೀಸ್, ಎನ್.ಸಿ.ಸಿ. ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ್ ಸೇವಾದಳದ ವತಿಯಿಂದ ಕವಾಯತು ಪ್ರದರ್ಶನ ನಡೆಯಿತು. ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕಗಳಿಸಿದವರಿಗೆ ಬಹುಮಾನ ವಿತರಿಸಲಾಯಿತು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಕೆ. ಅಂಬುಜ ಸ್ವಾಗತಿಸಿದರು. ಉಪನ್ಯಾಸಕ ಚಾಲ್ರ್ಸ್ ಡಿಸೋಜ ನಿರೂಪಿಸಿದರು. ಸಹ ಶಿಕ್ಷಕ ಎ.ವಿ.ಮಂಜುನಾಥ್ ವಂದಿಸಿದರು. ನಂತರ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.

ಸಮಾರಂಭಕ್ಕೆ ಮೊದಲು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸ್ತಬ್ಧ ಚಿತ್ರಗಳೊಂದಿಗೆ ಮೆರವಣಿಗೆ ನಡೆಯಿತು.