ಸೋಮವಾರಪೇಟೆ,ನ.2: ಇಲ್ಲಿನ ತಥಾಸ್ತು ಸಾತ್ವಿಕ ಸಂಸ್ಥೆಯ ನೇತೃತ್ವದಲ್ಲಿ, ನಯನ ಮಹಿಳಾ ಸಂಘದ ಸಹಯೋಗದೊಂದಿಗೆ ತಾ. 5ರಂದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರಕ್ಕೆ ಚಾಲನೆ ದೊರೆಯಲಿದ್ದು, ಸಾರ್ವಜನಿಕರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ರಕ್ತದಾನಿಗಳು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ರವೀಂದ್ರ ಹಾನಗಲ್ಲು ತಿಳಿಸಿದ್ದಾರೆ.