ಸೋಮವಾರಪೇಟೆ, ನ. 1: ದೇಶದ ಆರ್ಥಿಕ ಪ್ರಗತಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಕೊಡುಗೆ ಅಪಾರವಾಗಿದೆ ಎಂದು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ಅಭಿಪ್ರಾಯಿಸಿದರು.

ಇಲ್ಲಿನ ವಿಜಯಾ ಬ್ಯಾಂಕ್‍ನಲ್ಲಿ ಆಯೋಜಿಸಲಾಗಿದ್ದ ಬ್ಯಾಂಕ್‍ನ 88ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಜನತೆಯ ಆರ್ಥಿಕ ಮಟ್ಟ ಸುಧಾರಣೆಯಲ್ಲೂ ಬ್ಯಾಂಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ವಹಿವಾಟುಗಳಿಗೆ ಸಂಬಂಧಿಸಿದಂತೆ ಬ್ಯಾಂಕ್‍ಗಳು ಕೆಲವೊಂದು ಒತ್ತಡಗಳನ್ನು ಎದುರಿಸಬೇಕಿದೆ. ಬ್ಯಾಂಕಿಂಗ್ ಕ್ಷೇತ್ರದ ಸೋಮವಾರಪೇಟೆ, ನ. 1: ದೇಶದ ಆರ್ಥಿಕ ಪ್ರಗತಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಕೊಡುಗೆ ಅಪಾರವಾಗಿದೆ ಎಂದು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ಅಭಿಪ್ರಾಯಿಸಿದರು.

ಇಲ್ಲಿನ ವಿಜಯಾ ಬ್ಯಾಂಕ್‍ನಲ್ಲಿ ಆಯೋಜಿಸಲಾಗಿದ್ದ ಬ್ಯಾಂಕ್‍ನ 88ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಜನತೆಯ ಆರ್ಥಿಕ ಮಟ್ಟ ಸುಧಾರಣೆಯಲ್ಲೂ ಬ್ಯಾಂಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ವಹಿವಾಟುಗಳಿಗೆ ಸಂಬಂಧಿಸಿದಂತೆ ಬ್ಯಾಂಕ್‍ಗಳು ಕೆಲವೊಂದು ಒತ್ತಡಗಳನ್ನು ಎದುರಿಸಬೇಕಿದೆ. ಬ್ಯಾಂಕಿಂಗ್ ಕ್ಷೇತ್ರದ ಚಂದ್ರಶೇಖರ್ ಮಾತನಾಡಿ, 88 ವರ್ಷಗಳನ್ನು ಪೂರೈಸಿರುವ ಬ್ಯಾಂಕ್ ಇಂದು 2250 ಶಾಖೆಗಳ ಮೂಲಕ 3ಲಕ್ಷ ಕೋಟಿಗೂ ಅಧಿಕ ವಹಿವಾಟು ನಡೆಸಿದೆ. ದೇಶಾದ್ಯಂತ 2200 ಎಟಿಎಂಗಳ ಮೂಲಕ ನಗದು ವಹಿವಾಟು ನಡೆಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಸದಾನಂದ್, ಸುಂದರ್, ನಂದಕುಮಾರ್, ಶಿವಕುಮಾರ್, ಮೃತ್ಯುಂಜಯ, ಸ್ಟ್ಯಾನಿ ರೊಜಾರಿಯೋ, ಪ್ರಕಾಶ್, ಗಣೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.