ಮಡಿಕೇರಿ, ನ. 3: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಸಂಘದ ಸದಸ್ಯರು ಮತ್ತು ಅವರ ಮಕ್ಕಳು 2017-18ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ, ಆದ್ಯತೆಯ ಮೇರೆಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಭಾಗವಹಿಸಲು ಇಚ್ಚಿಸುವವರು ತಮ್ಮ ಸಾಧನೆಯ ಪ್ರತಿಯನ್ನು ಕಾರ್ಯದರ್ಶಿ ಕೊಡಗು ಗೌಡ ನಿವೃತ್ತ ನೌಕರರ ಸಂಘ, ಅ/o ಕೊಡಗು ಗೌಡ ವಿದ್ಯಾ ಸಂಘ ಮಡಿಕೇರಿ ಇಲ್ಲಿಗೆ ತಾ. 10ರೊಳಗೆ ಕಳುಹಿಸಿಕೊಡಲು ತಿಳಿಸಲಾಗಿದೆ. ನಂತರ ಬಂದ ಅರ್ಜಿಯನ್ನು ಸ್ವೀಕರಿಸಲಾಗುವದಿಲ್ಲ. ಅರ್ಜಿಯಲ್ಲಿ ತಮ್ಮ ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕು ಎಂದು ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದ್ದಾರೆ.