ಮಡಿಕೇರಿ, ನ. 3: ಕುಟುಂಬ ಕಲ್ಯಾಣ ಕಾರ್ಯಕ್ರಮದ ಶಸ್ತ್ರ ಚಿಕಿತ್ಸಾ ಶಿಬಿರವು ನವೆಂಬರ್-2018ರ ಮಾಹೆಯಲ್ಲಿ ನಡೆಯಲಿದೆ.

ತಾ. 28 ರಂದು ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲ್ಯಾಪ್ರೊಸ್ಕೋಪಿಕ್, ನವೆಂಬರ್, 14 ರಂದು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ, ನವೆಂಬರ್, 16 ರಂದು ಮಾದಾಪುರ ಮತ್ತು ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನವೆಂಬರ್, 20 ರಂದು ಮಡಿಕೇರಿ ತಾಲ್ಲೂಕಿನ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟ್ಯುಬೆಕ್ಟಮಿ ಚಿಕಿತ್ಸೆ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.