ಮಡಿಕೇರಿ, ನ. 3: ಜಿಲ್ಲಾಡಳಿತ, ಜಿ.ಪಂ.ಮತ್ತು ಆಯುಷ್ ಇಲಾಖೆ ವತಿಯಿಂದ ತಾ. 5 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಧನ್ವಂತರಿ ಜಯಂತಿ ಹಾಗೂ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸಿ.ಕೆ. ಬೋಪಣ್ಣ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಎನ್.ಟಿ. ಕಿರಣ್ ಕಾರ್ಯಪ್ಪ, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ನಿರ್ದೇಶಕಿ ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಎಚ್. ರಾಮಚಂದ್ರ ಇತರರು ಪಾಲ್ಗೊಳ್ಳಲಿದ್ದಾರೆ.