ಸುಂಟಿಕೊಪ್ಪ, ನ. 3: ಗದ್ದೆಹಳ್ಳದÀ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಪೋಷಕರ ಸಭೆ ಮತ್ತು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕವನ್ನು ವಿತರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಕ್ಷೇತ್ರದ ತಾಲೂಕು ಪಂಚಾಯಿತಿ ಸದಸ್ಯೆ ಒಡಿಯಪ್ಪನ ವಿಮಲಾವತಿ ಮಾತನಾಡಿ, ವಸತಿ ನಿಲಯದಲ್ಲಿ ಸಿಗುವ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಚೆನ್ನಾಗಿ ಕಲಿತು ದೇಶದ ಉತ್ತಮ ಪ್ರಜೆಯಾಗಬೇಕು ಎಂದರು. ಪೋಷಕರು ಮಕ್ಕಳನ್ನು ನಿತ್ಯ ಶಾಲೆಗೆ ತೆರಳುವಂತೆ ಪ್ರೋತ್ಸಾಹಿಸಬೇಕೆಂದರು.
ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಅಧ್ಯಕ್ಷತೆ ವಿದ್ಯಾರ್ಥಿಗಳು ಶಿಸ್ತು, ಸಮಯ ಪಾಲನೆ ರೂಢಿಸಿಕೊಂಡರೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಮುಂದುವರಿಯಲು ಸಾಧ್ಯ ಎಂದರು. ವಸತಿ ನಿಲಯದ ಮೇಲ್ವಿಚಾರಕ ಕೆ.ಜೆ. ಗೋಪಾಲ ವಸತಿ ನಿಲಯದಿಂದ ಸಿಗುವ ಮೂಲಭೂತ ಸೌಕರ್ಯ ಅದರ ಸದ್ಭಳಕೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳು ಮಕ್ಕಳಿಗೆ ಪುಸ್ತಕವನ್ನು ವಿತರಿಸಿದರು. ವಸತಿ ನಿಲಯದ ಸಿಬ್ಬಂದಿಗಳಾದ ಮಲ್ಲಿಕಾರ್ಜುನ, ಸತೀಶ್, ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.