ಮಡಿಕೇರಿ, ನ. 3 : ಪಟಾಕಿ ಸಿಡಿಸುವದರಿಂದ ವಾಯುಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ಉಂಟಾಗಲಿದೆ. ಆದ್ದರಿಂದ ‘ಪರಿಸರ ಸ್ನೇಹಿ ಹಸಿರು ದೀಪಾವಳಿ’ ಆಚರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿಮಡಿಕೇರಿ, ನ. 3 : ಪಟಾಕಿ ಸಿಡಿಸುವದರಿಂದ ವಾಯುಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ಉಂಟಾಗಲಿದೆ. ಆದ್ದರಿಂದ ‘ಪರಿಸರ ಸ್ನೇಹಿ ಹಸಿರು ದೀಪಾವಳಿ’ ಆಚರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ ಅವರು ಮಾತನಾಡಿ ಪಟಾಕಿ ಸಿಡಿಸುವದರಿಂದ ವಾಯುಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ಉಂಟಾಗುವದರ ಜೊತೆಗೆ ಅಸ್ತಮಾ, ಮೆದುಳು ಜ್ವರ, ಹೃದಯಾಘಾತ ಉಂಟಾಗಲಿದೆ. ಆದ್ದರಿಂದ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಸಂತ ಮೈಕಲರ ಶಾಲೆಯ ಮುಖ್ಯಸ್ಥ ನವೀನ್ ಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದ್ದು, ಉತ್ತಮ ಪರಿಸರ ಕಾಪಾಡುವದು ಹಾಗೂ ಆರೋಗ್ಯಯುತ ಜೀವನದ ಬಗ್ಗೆ ಪ್ರತಿಯೊಬ್ಬರೂ ಹಣತೆಯ ದೀಪ ಹಚ್ಚುವಂತಾಗಬೇಕು ಎಂದು ಹೇಳಿದರು.

ಜಿಲ್ಲಾ ಪರಿಸರಾಧಿಕಾರಿ ಜಿ.ಆರ್.ಗಣೇಶನ್ ಪ್ರಾಸ್ತಾವಿಕ ಮಾತನಾಡಿ, ಪರಿಸರ ಸಂರಕ್ಷಣೆ ಮಾಡಿದ್ದಲ್ಲಿ ಹೆಚ್ಚಿನ ಆರೋಗ್ಯ ಕಾಣಬಹುದು, ಇಲ್ಲದಿದ್ದಲ್ಲಿ ಹಲವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದರು.

ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮ್ ಕುಮಾರ್ ಪ್ರತಿಜ್ಞಾ ವಿಧಿ ಭೋದಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಆಯುಕ್ತರಾದ ಜಿಮ್ಮಿ ಸೀಕ್ವೆರಾ, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ಎಂ.ಇ.ಮೊಹಿದ್ದೀನ್, ವೆಂಕಟನಾಯಕ ಇತರರು ಇದ್ದರು. ವಿಲ್ಫ್ರೆಡ್ ಕ್ರಾಸ್ತಾ ನಿರೂಪಿಸಿದರು, ಮಂಜುನಾಥ್ ವಂದಿಸಿದರು.