ಮಡಿಕೇರಿ, ನ. 3 :ವೈಷ್ಣವಿ ಫುಟ್ಬಾಲ್ ಕ್ಲಬ್ ವತಿಯಿಂದ 3ನೇ ವರ್ಷದ ‘ಹುತ್ತರಿ ಕಪ್-2018’ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿ ತಾ. 23 ರಿಂದ 25ರವರೆಗೆ ಮರಗೋಡಿನಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕ್ಲಬ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಮರಗೋಡಿನ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಾಕ್ ಔಟ್ ಮಾದರಿಯಲ್ಲಿ 7+2 ಆಟಗಾರರನ್ನು ಒಳಗೊಂಡ ತಂಡಗಳ ನಡುವೆ ಪಂದ್ಯಾವಳಿ ನಡೆಯಲಿದೆ ಯೆಂದು ಮಾಹಿತಿ ನೀಡಿದರು.
ಕಳೆದ ಸಾಲಿನ ಪಂದ್ಯಾವಳಿಯಲ್ಲಿ 20 ತಂಡಗಳು ಪಾಲ್ಗೊಂಡಿದ್ದವು, ಈ ಬಾರಿಯ ಪಂದ್ಯಾವಳಿಯಲ್ಲಿ ಮೊದಲು ಹೆಸರು ನೋಂದಾಯಿಸಿ ಕೊಂಡ 30 ತಂಡಗಳಿಗೆ ಅವಕಾಶವನ್ನು ನೀಡಲಾಗುತ್ತದೆ. ಆಸಕ್ತ ತಂಡಗಳು ತಾ.15 ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಪಾಣತ್ತಲೆ ಜಗದೀಶ್ ಮಂದಪ್ಪ (ಮೊ.9448976421) ದುಷ್ಯಂತ್ ಬಡುವಂಡ್ರ (ಮೊ. 8762549217), ಸುಜಯ್ ಬಡುವಂಡ್ರ (ಮೊ.9482631474) ಸಂಪರ್ಕಿಸಬಹುದೆಂದು ತಿಳಿಸಿದರು.
ಪಂದ್ಯಾವಳಿ ವಿಜೇತ ತಂಡಕ್ಕೆ 22,222 ರೂ. ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 11,111 ರೂ. ಮತ್ತು ಆಕರ್ಷಕ ಟ್ರೋಫಿಯನ್ನು ನೀಡಲಾಗುತ್ತದೆಂದು ಮಾಹಿತಿ ನೀಡಿದರು.
ಕ್ಲಬ್ ಉಪಾಧ್ಯಕ್ಷ ಗೋಪಾಲ್ ಸೋಮಯ್ಯ ಮಾತನಾಡಿ, ಕೊಡಗಿನ ಕೃಷಿ ಸಂಸ್ಕøತಿಯ ಹಬ್ಬ ಹುತ್ತರಿ ಹಬ್ಬಕ್ಕೆ ಪೂರಕವಾಗಿ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಪೂರಕವಾಗಿ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ .