ಮಡಿಕೇರಿ, ನ. 3: ನಗರದ ಬಾಲಕರ ಬಾಲ ಮಂದಿರದಲ್ಲಿ 44 ಮಂದಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಇಂದು ವಿತರಣೆ ಮಾಡಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ತ್ರಿಚಕ್ರ ವಾಹನ ವಿತರಿಸಲಾಯಿತು. ತ್ರಿಚಕ್ರ ವಾಹನ ಕೀ ಹಸ್ತಾಂತರಿಸಿದ ಸಚಿವರು ವಿಕಲಚೇತನರು ತ್ರಿಚಕ್ರ ವಾಹನಗಳನ್ನು ಬಳಸಿಕೊಂಡು ಇತರರಂತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸು ವಂತಾಗಬೇಕು ಎಂದು ಸಲಹೆ ಮಾಡಿದರು. ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಡಿವೈಎಸ್ಪಿ ಸುಂದರರಾಜ್ ಇತರರು ಇದ್ದರು.