ಮಡಿಕೇರಿ, ನ. 4: ತಾ. 10 ರಂದು ಟಿಪ್ಪು ಜಯಂತಿ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆ ನಿಟ್ಟಿನಲ್ಲಿ ಇಂದು ಪೊಲೀಸ್ ಇಲಾಖೆ ಮಹತ್ವದ ಸಭೆ ನಡೆಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಡಿ.ಪಿ. ಸುಮನ್ ಹಾಗೂ ಎಲ್ಲಾ ಉಪ ಅಧೀಕ್ಷರು ಮತ್ತು ವೃತ್ತ ನಿರೀಕ್ಷಕರೊಂದಿಗೆ ಸುದೀರ್ಘ ಸಭೆ ನಡೆಸುವ ಮೂಲಕ ಯಾವದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುಂಜಾಗ್ರತಾ ಕ್ರಮಕ್ಕೆ ನಿರ್ಣಯಿಸಲಾಗಿದೆ ಎಂದು ವಿಶ್ವಾಸನೀಯ ಮೂಲಗಳಿಂದ ಗೊತ್ತಾಗಿದೆ.