ಮಡಿಕೇರಿ, ನ. 4: ಆಕಾಶವಾಣಿ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ-2019. ಈ ಬಾರಿ ಜನವರಿ-2019ರಂದು ಬೆಂಗಳೂರು ಆಕಾಶವಾಣಿಯಲ್ಲಿ ಆಯೋಜಿಸಲಾಗಿದೆ. ಈ ಸ್ಪರ್ಧೆಗೆ ಮಡಿಕೇರಿ ಆಕಾಶವಾಣಿಯಿಂದ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆಮಾಡಿ ಕಳುಹಿಸಲಾಗುವದು. ಇದಕ್ಕಾಗಿ ಆಕಾಶವಾಣಿ ಮಡಿಕೇರಿಯಲ್ಲಿ ಪೂರ್ವಭಾವಿ ರಸಪ್ರಶ್ನೆ ಸ್ಪರ್ಧೆಯನ್ನು ಇದೇ ನವೆಂಬರ್‍ನ ಕೊನೆಯಲ್ಲಿ ಆಯೋಜಿಸಲಾಗಿದ್ದು ಆಸಕ್ತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಇದರಲ್ಲಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದು. ಹೆಸರು ನೋಂದಾಯಿಸಿಕೊಳ್ಳಲು ತಾ. 15 ಕೊನೆಯ ದಿನ.
ರಸಪ್ರಶ್ನೆಯ ವಿಷಯ- ‘150ನೇ ವರ್ಷದ ಗಾಂಧಿಜಯಂತಿ’. ಪ್ರಶ್ನೆಗಳು ಕನ್ನಡದಲ್ಲಿ ಇರುತ್ತವೆ. ಈ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿಗಳನ್ನು ಬೆಂಗಳೂರು ಆಕಾಶವಾಣಿಯಲ್ಲಿ ನಡೆಯುವ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಕಳುಹಿಸಲಾಗುವದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- 8197537777 ಎಂದು ಕಾರ್ಯಕ್ರಮ ನಿರ್ವಾಹಕರಾದ ವಿಜಯ ಅಂಗಡಿ ಅವರು ತಿಳಿಸಿದ್ದಾರೆ.