ಕೂಡಿಗೆ, ನ. 4 : ಕೂಡಿಗೆಯ ಕೂಡುಮಂಗಳೂರು ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಕೆ.ಕೆ.ಹೇಮಂತ್ಕುಮಾರ್ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಟಿ.ಪಿ.ಹಮೀದ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಯಾವದೇ ಸ್ಪರ್ಧೆ ಏರ್ಪಡಲಿಲ್ಲ. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ರಘು ಕಾರ್ಯನಿರ್ವಹಿಸಿದರು.