ಮಡಿಕೇರಿ, ನ. 4: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿಸೆಂಬರ್ 8 ರಂದು ಜಿಲ್ಲಾ ಮಟ್ಟದ ದ್ವಿತೀಯ ಮಕ್ಕಳ ಸಾಹಿತ್ಯ ಸಮ್ಮೇಳನವು ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಎಸ್.ಎಸ್. ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿಯೇ ಕವಿಗೋಷ್ಠಿ, ವಿಚಾರಗೋಷ್ಠಿ, ಗೀತಗಾಯನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಮುಕ್ತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಸಾಧನೆಯ ಸಂಪೂರ್ಣ ವಿವರ, ಹವ್ಯಾಸ, ಸಾಹಿತ್ಯದಲ್ಲಿ ಆಸಕ್ತಿಯಿರುವ ವಿಚಾರಗಳನ್ನು ಹಾಗೂ ತಮ್ಮ ಹೆಸರು ಸಂಪೂರ್ಣ ವಿಳಾಸದೊಂದಿಗೆ ತಾ. 13 ರೊಳಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಕಚೇರಿ ವೇಳೆಯಲ್ಲಿ ಮಡಿಕೇರಿಯ ಕೋಟೆ ಆವರಣದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ತಲಪಿಸಬಹುದು. ಹೆಚ್ಚಿನ ವಿವರಗಳಿಗೆ ಬಿ.ಎಸ್. ಲೋಕೇಶ್‍ಸಾಗರ್ ಅಧ್ಯಕ್ಷರು 8277066123 ಮತ್ತು ಅಬ್ದುಲ್‍ರಬ್ ಕೊಡ್ಲಿಪೇಟೆ ಹೋಬಳಿ ಅಧ್ಯಕ್ಷರು 9480083482 ನ್ನು ಸಂಪರ್ಕಿಸಲು ತಿಳಿಸಿದೆ.