ಮಡಿಕೇರಿ, ನ. 4: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳ ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು. ಈ ನಿಟ್ಟಿನಲ್ಲಿ 2018ರ ನವೆಂಬರ್ ಮಾಹೆಯಲ್ಲಿ ಮಾತ್ರ ತಿಂಗಳು ಪೂರ್ತಿ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿಯಲ್ಲಿ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಎಲ್ಲಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಮಾರಾಟಕ್ಕೆ ಲಭ್ಯವಿದೆ.

ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇ.50ರ ರಿಯಾಯಿತಿಯಲ್ಲಿ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ಆನ್‍ಲೈನ್ ಮೂಲಕ ಹಣ ಪಾವತಿಸಿ ನೇರವಾಗಿ ಪಡೆಯಬಹುದು.