ನಾಪೋಕ್ಲು, ನ. 4: ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಂಕುರ್ ಪಬ್ಲಿಕ್ ಶಾಲೆಯಲ್ಲಿ ಅಂತರರಾಷ್ಟ್ರೀಯ ಲಯನ್ಸ್ ಕ್ಲಬ್ ವತಿಯಿಂದ ಪೀಸ್ ಪೋಸ್ಟರ್ ಕಂಟೆಸ್ಟ್ ಪ್ರಯುಕ್ತ 11 ರಿಂದ 13 ವರ್ಷ ವಯೋಮಿತಿಯ ವಿದ್ಯಾರ್ಥಿಗಳಿಗೆ ಕೈಂಡ್‍ನೆಸ್ ಮ್ಯಾಟರ್ಸ್ ಎಂಬ ಧ್ಯೇಯವಾಕ್ಯದಡಿಯಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ನಾಪೋಕ್ಲು ಲಯನ್ಸ್ ಕ್ಲಬ್ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಪೋಕ್ಲು ವಿಭಾಗದ ವಿವಿಧ ಶಾಲೆಗಳ 15 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಮುಕ್ಕಾಟಿರ ವಿನಯ್ ಕಾರ್ಯಕ್ರಮದ ಧ್ಯೇಯೋದ್ದೇಶಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಕನ್ನಂಬಿರ ಸುಧಿ ತಿಮ್ಮಯ್ಯ, ಸದಸ್ಯರಾದ ಎ.ಸಿ. ಬೋಪಣ್ಣ, ಯು.ಎ. ತಿಮ್ಮಯ್ಯ, ರೇಷ್ಮಾ ಉತ್ತಪ್ಪ ಹಾಗೂ ಅಂಕುರ್ ಶಾಲೆಯ ಪ್ರಾಂಶುಪಾಲೆ ರತ್ನಾ ಚರ್ಮಣ ಪಾಲ್ಗೊಂಡಿದ್ದರು.