ಮಡಿಕೇರಿ, ನ. 4: ಸೋಮವಾರಪೇಟೆ ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ವ ಶಿಕ್ಷಣ ಅಭಿಯಾನ ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ವಿಕಲ ಚೇತನ ಮಕ್ಕಳ 2018-19ನೇ ಸಾಲಿನ ಉಚಿತ ವೈದ್ಯಕೀಯ ತಪಾಸಣೆ ಮತ್ತು ಮೌಲ್ಯಾಂಕನ ಶಿಬಿರವು ತಾ. 12 ರಂದು ಬೆಳಿಗ್ಗೆ 9.30 ಗಂಟೆಗೆ ಸೋಮವಾರಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿರುವ ಚೆನ್ನಬಸಪ್ಪ ಸಭಾಂಗಣದಲ್ಲಿ ನಡೆಯಲಿದೆ.
ಸೋಮವಾರಪೇಟೆ ತಾಲೂಕು ವ್ಯಾಪ್ತಿಯ 1 ರಿಂದ 10ನೇ ತರಗತಿಯವರೆಗಿನ ಎಲ್ಲಾ ಸರಕಾರಿ ಅನುದಾನಿತ, ಅನುದಾನ ರಹಿತ ಎಲ್ಲಾ ಕಿರಿಯ ಹಿರಿಯ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ಮಕ್ಕಳನ್ನು ಆಯಾಯ ಶಾಲೆಯ ಶಿಕ್ಷಕರು ಹಾಗೂ ಮಕ್ಕಳ ಪೋಷಕರು ಕರೆತಂದು ವೈದ್ಯಕೀಯ ತಪಾಸಣೆ ಮಾಡಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್. ನಾಗರಾಜಯ್ಯ ತಿಳಿಸಿದ್ದಾರೆ. ಅಗತ್ಯವುಳ್ಳ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದ್ದು, ಹೆಚ್ಚಿನ ಮಾಹಿತಿಗೆ ಹೆಚ್.ಎಸ್. ಕೇಶವಮೂರ್ತಿ ಬಿ.ಐ.ಈ.ಆರ್.ಟಿ. 9902047136, ರತ್ನಮ್ಮ ಬಿ.ಐ.ಈ.ಆರ್.ಟಿ 9449403078 ಇವರನ್ನು ಸಂಪರ್ಕಿಸಬಹುದು.