ಮಡಿಕೇರಿ, ನ. 7: ಜಿಲ್ಲೆಯಾದ್ಯಂತ ಕಾಲೇಜು ಹಾಗೂ ಇನ್ನಿತರ ಕಡೆಗಳಲ್ಲಿ ಗಾಂಜಾ ಸೊಪ್ಪನ್ನು ವಿದ್ಯಾರ್ಥಿಗಳಿಗೆ ನೀಡಿ ಸಮಾಜದ ಸ್ವಾಸ್ಥ್ಯ ಹಾಳುಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನೆÀ್ನಲೆಯಲ್ಲಿ ಪೊಲೀಸ್ ಅಧೀಕ್ಷಕರು ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮಾದಕ ವಸ್ತುಗಳ ಅಕ್ರಮ ಮಾರಾಟದ ಬಗ್ಗೆ ಮಾಹಿತಿ ಕಲೆಹಾಕಿ ಧಾಳಿ ನಡೆಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ಇಂದು ಡಿಸಿಐಬಿ ಪೊಲೀಸ್ ನಿರೀಕ್ಷಕರಿಗೆ ಬಂದ ಖಚಿತ ಮಾಹಿತಿಯನ್ನಾಧರಿಸಿ ಮುತ್ತಾರ್‍ಮುಡಿ ಗ್ರಾಮದ ನಿವಾಸಿ ಕೆ. ಪ್ರಸನ್ನ ಅವರ ಶುಂಠಿ ಕೃಷಿ ಮಾಡಿರುವ ಜಮೀನನ್ನು ಪರಿಶೀಲಿಸಿದ ಸಂದರ್ಭ ಶುಂಠಿ ಗಿಡದ ಮಧ್ಯದಲ್ಲಿ ಎರಡು ಗಾಂಜಾ ಗಿಡಗಳನ್ನು ಬೆಳೆಸಿರುವದು ಕಂಡು ಬಂದಿದ್ದು, ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.ಡಿಸಿಐಬಿ ಪೊಲೀಸ್ ನಿರೀಕ್ಷಕ ಎಂ. ಮಹೇಶ್ ಅವರ ನೇತೃತ್ವದಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ವಿ. ಚೇತನ್, ಡಿಸಿಐಬಿಯ ಎಎಸ್‍ಐ ಕೆ.ವೈ. ಹಮೀದ್, ಸಿಬ್ಬಂದಿಗಳಾದ ಬಿ.ಎಲ್. ಯೋಗೇಶ್ ಕುಮಾರ್, ಎಂ.ಎನ್. ನಿರಂಜನ್, ಕೆ.ಎಸ್. ಅನಿಲ್ ಕುಮಾರ್, ಕೆ.ಆರ್. ವಸಂತ, ವಿ.ಜಿ. ವೆಂಕಟೇಶ್, ಕಿರಣ್, ದಿನೇಶ್, ಚಾಲಕರಾದ ಕೆ.ಎಸ್. ಶಶಿಕುಮಾರ್, ಅರುಣ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.