ಕುಶಾಲನಗರ, ನ. 9: ಪೂಜೆಗೆಂದು ದೇವಾಲಯಕ್ಕೆ ಆಗಮಿಸಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿದ ಘಟನೆ ನಡೆದಿದೆ. ಪಟ್ಟಣದ ಶ್ರೀ ಕೋಣಮಾರಿಯಮ್ಮ ದೇವಾಲಯದ ವಾರ್ಷಿಕ ಪೂಜೋತ್ಸವಕ್ಕೆ ಆಗಮಿಸಿದ್ದ ಗುಮ್ಮನಕೊಲ್ಲಿ ನಿವಾಸಿ ಪೂವಮ್ಮ ಎಂಬವರು ತಮ್ಮ ಕತ್ತಿನಲ್ಲಿದ್ದ 25 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡವರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದಿದ್ದ ಸಂದರ್ಭ ಈ ಕೃತ್ಯ ನಡೆದಿದೆ. ಈ ಸಂಬಂಧ ದೂರು ದಾಖಲಾಗದಿದ್ದರೂ ಕೂಡ ಕುಶಾಲನಗರ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.