ಸುಂಟಿಕೊಪ್ಪ, ನ. 10: ಲೋಕಸಭಾ ಮತ್ತು ವಿಧಾನಸಭೆಗಳಿಗೆ ನಡೆದ ಉಪಚುನಾವಣಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದು, ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವನ್ನು ಆಚರಿಸಿದರು. ಇಲ್ಲಿನ ಜಿ.ಪಂ. ಸದಸ್ಯ ಪಿ.ಎಂ. ಲತೀಫ್ ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಧ್ವಜವನ್ನು ಹಿಡಿದು ಜಮಾವಣೆಗೊಂಡ ಕಾರ್ಯಕರ್ತರು ಪಕ್ಷದ ಮುಖಂಡರು ಹಾಗೂ ಜಯಗಳಿಸಿದ ಅಭ್ಯರ್ಥಿಗಳಿಗೆ ಜೈಕಾರ ಕೂಗುತ್ತಾ ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು.

ಪಂಚಾಯಿತಿ ಸದಸ್ಯರಾದ ರಜಾಕ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಎಸ್. ರವಿ ಹಾಗೂ ಕಾರ್ಯಕರ್ತರು ಇದ್ದರು.