ಮಡಿಕೇರಿ, ನ. 10: ಮಡಿಕೇರಿ ತಾಲೂಕಿನ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ರೋಷ್ಟರ್ ಕಂ.ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಬಿಡಿಎಸ್ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಯನ್ನು ಹಾಗೂ ಇತರ ದಾಖಲಾತಿಗಳನ್ನು ತಾ. 20 ರ ಸಂಜೆ 5 ಗಂಟೆಯೊಳಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ತಾ. 22 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಾಗುವದು. ಸಂದರ್ಶನಕ್ಕೆ ತಮ್ಮ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.