ಸುಂಟಿಕೊಪ್ಪ, ನ. 10: ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಮತ್ತು ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಹಸಿರು ಮತ್ತು ಸ್ವಸ್ತ ದೀಪಾವಳಿ ಆಚರಣೆ ಕುರಿತು ಜಾಗೃತಿ ಆಂದೋಲನ ನಡೆಸಲಾಯಿತು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ. ಕೊಡಗು ಜಿಲ್ಲೆ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಹಾಗೂ ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಶಾಲೆಯ ಇಕೋ ಕ್ಲಬ್ ವತಿಯಿಂದ ನಡೆದ ಪರಿಸರ ಜಾಗೃತಿ ಆಂದೋಲನದಲ್ಲಿ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಪರಿಸರ ಜಾಗೃತಿ ಆಂದೋಲನದ ಮಹತ್ವ ಹಾಗೂ ಹಸಿರು ಮತ್ತು ಸ್ವಸ್ತ ದೀಪಾವಳಿ ಆಚರಣೆ ಅಗತ್ಯತೆ ಕುರಿತು ಮಾಹಿತಿ ನೀಡಿದ ಇಕೋ ಕ್ಲಬ್‍ನ ಉಸ್ತುವಾರಿ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾಲಿನ್ಯದ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು.
ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ಮಾತನಾಡಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಟಿ. ವೆಂಕಟೇಶ್, ಶಿಕ್ಷಕರಾದ ಚಿತ್ರಾ, ಪಿ.ಇ. ನಂದಾ, ಟಿ. ಪವಿತ್ರ ಇತರರು ಪಾಲ್ಗೊಂಡಿದ್ದರು.