ಕೂಡಿಗೆ, ನ. 14: ಇತ್ತೀಚಿಗೆ ಹಾಸನದಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕೂಡಿಗೆ ಕ್ರೀಡಾ ಶಾಲೆಯ ಬಾಲಕರ ಹಾಕಿ ತಂಡವು ಮೈಸೂರು ಡಿವಿಷನ್ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದಿದ್ದು, ತಂಡದ ಆರು ಕ್ರೀಡಾಪಟುಗಳು ರಾಷ್ಟ್ರಮಟ್ಟದ ತಂಡಕ್ಕೆ ಆಯ್ಕೆಗೊಂಡಿದ್ದಾರೆ. ರಾಷ್ಟ್ರಮಟ್ಟದ ಹಾಕಿ ಕ್ರೀಡಾಕೂಟ ತಾ. 29 ರಂದು ಛತ್ತಿಸ್‍ಗಢದ ರಾಂಚಿಯಲ್ಲಿ ನಡೆಯಲಿದೆ.