ಮಡಿಕೇರಿ, ನ. 13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ತಾ. 14 ರಂದು ಮಡಿಕೇರಿಯ ರಾಜಾಸೀಟ್‍ನಲ್ಲಿ ಹಮ್ಮಿಕೊಂಡಿರುವ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಅನಂತಕುಮಾರ್ ವಿಧಿವಶವಾದ ಹಿನ್ನೆಲೆ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿರುವದರಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ: 08272- 298379 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.