ಮಡಿಕೇರಿ, ನ. 21: ಇತ್ತೀಚೆಗೆ ಹಾಸನದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗ ಹಾಕಿ ಪಂದ್ಯಾವಳಿಗೆ ಜಿಲ್ಲೆಯಿಂದ ಆಯ್ಕೆಯಾಗಿದ್ದ ಪಾಂಡಂಡ ದೇಚಮ್ಮ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇಲ್ಲಿನ ಸಾಯಿ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ದೇಚಮ್ಮ, ಜಾಖರ್ಂಡ್ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾಳೆ. ಈಕೆ ಪಾಂಡಂಡ ಗಣೇಶ್ ಹಾಗೂ ಸ್ವಾತಿ ದಂಪತಿಯ ಪುತ್ರಿ.