ಸೋಮವಾರಪೇಟೆ,ನ.26: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ತಾ. 27ರಂದು (ಇಂದು) ಪೂರ್ವಾಹ್ನ 10.30ಗಂಟೆಗೆ ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿಕಲಚೇತನ ಮಕ್ಕಳು ತಮ್ಮ ಆಧಾರ್ ಮತ್ತು ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕೆಂದು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.