ಮಡಿಕೇರಿ, ನ. 26: 2018ರಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ 70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. 30 ಕೊನೆ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ವೆಬ್‍ಸೈಟ್: ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ನೋಡುವದು. ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವದು. ಸಹಾಯವಾಣಿ ಸಂಖ್ಯೆ : 8050770004. ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಕಚೇರಿಯನ್ನು ಹಾಗೂ ಇಲ್ಲಿನ ದೂ.ಸಂ : 08272-225628 ನ್ನು ಸಂಪರ್ಕಿಸಬಹುದು.

ಫೆಲೋಶಿಪ್‍ಗೆ ಅರ್ಜಿ

ಪ್ರಸಕ್ತ(2018-19) ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಹಾಗೂ ಇತರೆ ಓಬಿಸಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ. 10 ಸಾವಿರದಂತೆ ವ್ಯಾಸಂಗ ವೇತನ, ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಿಂದ ಈ ಹಿಂದೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್‍ಗೆ ಆಯ್ಕೆಯಾಗಿದ್ದು, ಪ್ರಸ್ತುತ ಸಾಲಿನಲ್ಲಿ ಮುಂದುವರಿಯುತ್ತಿ ರುವ ಅರ್ಹ ನವೀಕರಣ ವಿದ್ಯಾರ್ಥಿಗಳು ಹಾಗೂ 2018-19ನೇ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಸಿಸುತ್ತಿರುವ ಹೊಸ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾ. 30 ಕೊನೆ ದಿನವಾಗಿದೆ. ವಿವರಗಳಿಗೆ ಇಲಾಖಾ ವೆಬ್‍ಸೈಟ್ ತಿತಿತಿ. bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ಹಾಗೂ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಬಹುದು.