ಮಡಿಕೇರಿ, ನ. 26: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯೋತ್ಸವ ಹಾಗೂ ವಿವಿಧ ಸ್ಪರ್ಧಾ ಕಾರ್ಯಕ್ರಮ ತಾ.28 ರಂದು ಮಡಿಕೇರಿಯಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ 10 ಗಂಟೆಗೆ ನಗರದ ರಾಜಾಸೀಟ್ ರಸ್ತೆಯಲ್ಲಿರುವ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವದು. 10.15ಕ್ಕೆ ಕಾವೇರಿ ಕಲಾಕ್ಷೇತ್ರದಲ್ಲಿ ಕನ್ನಡ ಧ್ವಜಾರೋಹಣ ನಡೆಯಲಿದೆ. ನಂತರ 10.30ಕ್ಕೆ ಕಲಾಕ್ಷೇತ್ರದಲ್ಲಿ ನಾಪೋಕ್ಲು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಡಾ. ಅವನಿಜ ಸೋಮಯ್ಯ ಅವರು ಕಾರ್ಯಕ್ರಮ ವನ್ನು ಉದ್ಘಾಟಿಸಲಿ ದ್ದಾರೆ. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಕೇಶವ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೊ, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಮಾಜಿ ಅಧ್ಯಕ್ಷ ಬಿ.ಎ.ಷಂಶುದ್ದೀನ್, ಕೊಡಗು ಪತ್ರಿಕಾ ಭವನದ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎ.ಮನುಶೆಣೈ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಉದ್ಘಾಟನೆ ಬಳಿಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಜಾನಪದ ಗೀತೆ ಸಮೂಹ ಗಾಯನ, 5-8ನೇ ತರಗತಿ ವಿದ್ಯಾರ್ಥಿಗಳಿಗೆ ಸಾಹಿತ್ಯ ಕ್ಷೇತ್ರದ ಗಣ್ಯರ ಛದ್ಮವೇಶ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಾನಪದ ಸಮೂಹ ನೃತ್ಯ ಹಾಗೂ ಸಾರ್ವಜನಿಕರಿಗೆ ಆಶುಭಾಷಣ ಸ್ಪರ್ಧೆ ಕಾರ್ಯಕ್ರಮ ನಡೆಯಲಿದೆ.

ಅಪರಾಹ್ನ 2.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಕೇಶವ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ. ಬಳಗದ ಉಪಾಧ್ಯಕ್ಷ ಎಂ.ಇ.ಮೊಹಿದ್ದೀನ್, ಪುದಿಯ ನೆರವನ ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿ ಐತಿಚಂಡ ರಮೇಶ್ ಉತ್ತಪ್ಪ ಉಪಸ್ಥಿತರಿರುತ್ತಾರೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಸ್ಥಳದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಬಳಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂತಾಪ: ಖ್ಯಾತ ನಟ ಅಂಬರೀಶ್, ಕೇಂದ್ರ ಸಚಿವ ಅನಂತ್‍ಕುಮಾರ್, ಮಾಜಿ ಸಚಿವ ಜಾಫರ್ ಷರೀಫ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದ ಬಳಗದ ವತಿಯಿಂದ ತೀವ್ರ ಸಂತಾಪ ವ್ಯಕ್ತಪಡಿಸಲಾಯಿತು. ಪತ್ರಿಕಾ ಭವನದಲ್ಲಿ ನಡೆದ ಸಂತಾಪ ಸಭೆಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು. ಈ ಸಂದರ್ಭ ಬಳಗದ ಅಧ್ಯಕ್ಷ ಕೇಶವ್ ಕಾಮತ್, ಉಪಾಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿ ಐತಿಚಂಡ ರಮೇಶ್ ಉತ್ತಪ್ಪ, ನಿರ್ದೇಶಕರಾದ ವಿಲ್‍ಫ್ರೆಡ್ ಕ್ರಾಸ್ತ, ಮುನೀರ್ ಅಹಮ್ಮದ್, ಲಿಯಾಖತ್ ಆಲಿ, ಸಲಹೆಗಾರರಾದ ಟಿ.ಪಿ.ರಮೇಶ್, ಬಿ.ಎ.ಷಂಶುದ್ದೀನ್ ಮುಂತಾದವರು ಉಪಸ್ಥಿತರಿದ್ದರು.