ಕುಶಾಲನಗರ, ನ. 26: ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡಲ್ಲಿ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕøತ ರಾಷ್ಟ್ರೀಯ ಬಾಕ್ಸಿಂಗ್ ತರಬೇತುದಾರ ಸುಭೇದಾರ್ ಚೇನಂಡ ಅಚ್ಚಯ್ಯ ಕುಟ್ಟಪ್ಪ ಹೇಳಿದÀರು.

ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ವಿಜ್ಞಾನ ಸಂಕೀರ್ಣ ವಿಭಾಗದ ಒಳಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶಿಸ್ತು, ಛಲ, ಶ್ರದ್ಧೆ, ನಿರಂತರ ಪ್ರಯತ್ನವನ್ನು ಅಳವಡಿಸಿಕೊಂಡಾಗ ಮಾತ್ರ ಶ್ರೇಷ್ಠ ಮಟ್ಟಕ್ಕೆ ಬೆಳೆಯಲು ಸಾಧವಾಗುತ್ತದೆ ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ಕೆ.ಕೆ.ಧರ್ಮಪ್ಪ, ಸ್ನಾತಕೋತ್ತರ ಕೇಂದ್ರವು ಕಳೆದ ಐದು ವರ್ಷಗಳಿಂದ ಕೊಡಗು, ದಕ್ಷಿಣಕನ್ನಡ, ಮೈಸೂರು, ಹಾಸನ ಹಾಗೂ ರಾಜ್ಯದ ಇನ್ನಿತರೆ ಜಿಲ್ಲೆಗಳಲ್ಲಿನ ವಿದ್ಯಾರ್ಥಿಗಳಿಗಷ್ಟೇ ಅಲ್ಲದೇ ನೆರೆ ರಾಜ್ಯಗಳ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣದ ಸೌಲಭ್ಯವನ್ನು ನೀಡುತ್ತಾ ಬಂದಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಭಾರ ನಿರ್ದೇಶಕ ಪ್ರೊ. ಮಂಜುಳಾ ಶಾಂತರಾಮ್ ಮಾತನಾಡಿ, ಯಾವದೇ ಸೇವೆ ಮಾಡುವಾಗ ಸಾರ್ಥಕ ಮನೋಭಾವನೆ ಇರಬೇಕು ಎಂದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಉಪನ್ಯಾಸಕ ವೃಂದ, ವಿದ್ಯಾರ್ಥಿ ನಾಯಕರು ಪಾಲ್ಗೊಂಡಿದ್ದರು.