ಗೋಣಿಕೊಪ್ಪ ವರದಿ, ನ. 26 : ಮೂಡುಬಿದಿರೆ ಆಳ್ವಾಸ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 79 ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್‍ನ 100 ಮೀಟರ್ ಓಟ ಸ್ಪರ್ಧೆಯಲ್ಲಿ ಕೊಡಗಿನ ಕಾಕೇರ ಪ್ರಜ್ವಲ್ ಮಂದಣ್ಣ ಬೆಳ್ಳಿ ಪದಕ ಗಳಿಸಿದ್ದಾರೆ.

100 ಮೀಟರ್ ಓಟವನ್ನು 10.58 ಸೆಕೆಂಡ್‍ನಲ್ಲಿ ಗುರಿ ಮುಟ್ಟುವ ಮೂಲಕ ಸಾಧನೆ ಮಾಡಿದರು. ಆ ಮೂಲಕ ವಿಶ್ವವಿದ್ಯಾಲಯ ಮಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಪರವಾಗಿ ದ್ವಿತೀಯ ಸ್ಥಾನ ಪಡೆದುಕೊಂಡರು. ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ. ವಿದ್ಯಾರ್ಥಿಯಾಗಿರುವ ಇವರು, ಕಿರುಗೂರು ಗ್ರಾಮದ ತಾರಾ ಹಾಗೂ ರವಿ ದಂಪತಿ ಪುತ್ರ. -ಸುದ್ದಿಪುತ್ರ