ಮಡಿಕೇರಿ, ನ. 26: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಸ್ತ್ರೀಶಕ್ತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀಶಕ್ತಿ ಗುಂಪುಗಳಿಗೆ ಹಾಗೂ ತಾಲೂಕು ಒಕ್ಕೂಟಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅತ್ಯುತ್ತಮ ಸ್ತ್ರೀಶಕ್ತಿ ಗುಂಪು ಹಾಗೂ ತಾಲೂಕು ಒಕ್ಕೂಟಗಳ ಪ್ರಶಸ್ತಿಗೆ ನಿಗದಿತ ನಮೂನೆ 1 ರಿಂದ 13ರ ವರೆಗಿನ ಮಾಹಿತಿಗಳನ್ನು ಭರ್ತಿ ಮಾಡಿ ಛಾಯಾಚಿತ್ರದೊಂದಿಗೆ ಪ್ರಸ್ತಾವನೆಯನ್ನು ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಸಲ್ಲಿಸಬೇಕು. ನಿಗದಿತ ನಮೂನೆಗಳನ್ನು ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ತಾ. 29 ರೊಳಗೆ ಜಿಲ್ಲಾ / ತಾಲೂಕು ಒಕ್ಕೂಟದ ಮುಖಾಂತರ ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳಿಗೆ ತಲುಪಿಸುವಂತೆ ಕೋರಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 028272-228196 (ಮಡಿಕೇರಿ), 08276-282281 (ಸೋಮವಾರಪೇಟೆ), 08274-249010 (ಪೊನ್ನಂಪೇಟೆ) ಇಲ್ಲಿ ಸಂಪರ್ಕಿಸಬಹುದಾಗಿದೆ.