ಮಡಿಕೇರಿ, ನ. 27: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದು, ಆರೋಪಿ ಯುವಕನನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಕಾಟಕೇರಿ ಗ್ರಾಮದ ಯುವಕ ಗಿರೀಶ್ ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕಾಟಕೇರಿಗೆ ಕರೆದೊಯ್ದು ಅಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿ ಗಿರೀಶನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೊಳಗಾದ ಯುವಕನ ವಿರುದ್ಧ ಗ್ರಾಮಾಂತರ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.